Advertisement

ಅಂಡರ್‌ಪಾಸ್‌ ಅತಿಕ್ರಮಣ:ಬಿಬಿಎಂಪಿಗೆ ಹೈ ನೋಟಿಸ್‌

01:07 PM May 31, 2019 | Team Udayavani |

ಬೆಂಗಳೂರು: ಮೆಜೆಸ್ಟಿಕ್‌ನಿಂದ ಸುಬೇದಾರ್‌ ಛತ್ರಂ ಹಾಗೂ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ‘ಅಂಡರ್‌ಪಾಸ್‌’ ಮಾರ್ಗವನ್ನು ಅತಿಕ್ರಮಣ ಮಾಡಿರುವ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ, ಬಿಬಿಎಂಪಿ ಹಾಗೂ ನಗರ ಪೊಲೀಸರಿಗೆ ಹೈಕೋರ್ಟ್‌ ಗುರುವಾರ ನೋಟಿಸ್‌ ಜಾರಿಗೊಳಿಸಿದೆ.

Advertisement

ಈ ಸಂಬಂಧ ರವಿಕುಮಾರ್‌ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎಎಸ್‌ ಓಕ್‌ ಹಾಗೂ ನ್ಯಾ. ಪಿ.ಎಸ್‌. ದಿನೇಶ್‌ ಕುಮಾರ್‌ ಅವರಿದ್ದ ವಿಭಾಗೀಯ ನ್ಯಾಯಪೀಠ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ, ಬಬಿಎಂಪಿ ಆಯುಕ್ತರು, ನಗರ ಪೊಲೀಸ್‌ ಆಯುಕ್ತು ಹಾಗೂ ಉಪ್ಪಾರಪೇಟೆ ಠಾಣಾ ಪೊಲೀಸರಿಗೆ ನೋಟಿಸ್‌ ಜಾರಿಗೊಳಿಸಿ ಅರ್ಜಿಗೆ ಸಂಬಂಧಿಸಿದಂತೆ ನಾಲ್ಕು ವಾರಗಳಲ್ಲಿ ಉತ್ತರ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಜುಲೈ 2ಕ್ಕೆ ಮುಂದೂಡಿತು.

ಮೆಜೆಸ್ಟಿಕ್‌ನಿಂದ ಸುಬೇದಾರ್‌ರ್ ಛತ್ರಂ ಹಾಗೂ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ‘ಅಂಡರ್‌ಪಾಸ್‌’ ಮಾರ್ಗವನ್ನು ಬೀದಿ ಬದಿ ವ್ಯಾಪಾರಿಗಳು ಅತಿಕ್ರಮಣ ಮಾಡಿಕೊಂಡಿದ್ದಾರೆ. ಅಂಡರ್‌ ಪಾಸ್‌ ಪ್ರವೇಶ ದ್ವಾರ ಮತ್ತು ಒಳಭಾಗದಲ್ಲಿ ವ್ಯಾಪಾರ ಚಟುವಟಿಕೆಗಳು ನಡೆಯುವುದರಿಂದ ಸಾರ್ವಜನಿಕರ ಓಡಾಟಕ್ಕೆ ಬಹಳ ತೊಂದರೆ ಆಗುತ್ತಿದೆ. ಈ ಬಗ್ಗೆ ಬಿಬಿಎಂಪಿ ಹಾಗೂ ಪೊಲೀಸರಿಗೆ ಹಲವು ಬಾರಿ ಮನವಿ ಕೊಟ್ಟರೂ ಪ್ರಯೋಜನವಾಗಿಲ್ಲ. ಆದ್ದರಿಂದ ಬೀದಿ ಬದಿ ವ್ಯಾಪಾರಿಗಳು ಅತಿಕ್ರಮಣ ಮಾಡಿಕೊಂಡಿರುವ ಅಂಡರ್‌ಪಾಸ್‌ ಮಾರ್ಗವನ್ನು ತೆರವುಗೊಳಿಸುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next