Advertisement
ಹಾಗೆಯೇ ಮೃತ ಯುವತಿ ದಾಖಲಾಗಿದ್ದ ಆಸ್ಪತ್ರೆಗೂ ಭೇಟಿ ನೀಡಿ ವೈದ್ಯರ ಲೋಪದೋಷಗಳ ಆರೋಪದ ಬಗ್ಗೆಯೂ ವಿಚಾರಣೆ ನಡೆಸಲಾಗಿದೆ. ಘಟನೆಗೆ ಕಾರಣವೇನು? ಏನೆಲ್ಲಾ ಸಮಸ್ಯೆ ಇತ್ತು? ಎಂಬ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಘಟನಾ ಸ್ಥಳದಲ್ಲಿ ಒಂದೆರಡು ಟ್ಯಾಂಕರ್‌ಗಳ ನೀರು ಹರಿಸುವ ಮೂಲಕ ನೀರು ಒಳಚರಂಡಿ ಮೂಲಕ ಸರಾಗವಾಗಿ ನೀರು ಹರಿದು ಹೋಗುತ್ತದೆಯೇ? ಎಂದು ಪರಿಶೀಲನೆ ನಡೆಸಿದ್ದಾರೆ.
Related Articles
Advertisement
ತುರ್ತಾಗಿ ನಿರ್ವಹಣೆ ಚರ್ಚೆ: ನಗರದಲ್ಲಿ ನೂರಾರು ಅಂಡರ್‌ಪಾಸ್‌ಗಳಿದ್ದು, ಮುಂದಿನ ದಿನಗಳಲ್ಲಿ ಅವುಗಳು ಕೂಡ ಮೃತ್ಯುಕೂಪವಾಗುವ ಸಾಧ್ಯತೆಯಿದೆ. ಬಹುತೇಕ ಅಂಡರ್‌ಪಾಸ್‌ಗಳಲ್ಲಿ ನೀರು ನಿಲ್ಲುತ್ತದೆ. ಸರಿಯಾಗಿ ನೀರು ಹೊರಗಡೆ ಹೋಗಲು ಒಳಚರಂಡಿ ವ್ಯವಸ್ಥೆ ಇಲ್ಲ. ಹೀಗಾಗಿ ತುರ್ತಾಗಿ ಅವುಗಳ ನಿರ್ವಹಣೆ ಬಗ್ಗೆ ಸ್ಥಳೀಯ ಸಂಸ್ಥೆಗಳ ಜತೆ ಚರ್ಚಿಸಬೇಕಿದೆ. ಈ ಕುರಿತು ಲೋಕಾಯುಕ್ತರಿಗೆ ಮಾಹಿತಿ ನೀಡಲಾಗುತ್ತದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.
ಏನಿದು ಪ್ರಕರಣ?: ನಗರದಲ್ಲಿ ಮೇ 21 ರಂದು ಸುರಿದ ಭಾರಿ ಮಳೆಗೆ ಕೆ.ಆರ್.ಸರ್ಕಲ್ ಅಂಡರ್‌ಪಾಸ್‌ನಲ್ಲಿ ಕಾರು ಮುಳುಗಿದ ಪರಿಣಾಮ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಮೃತಪಟ್ಟಿದ್ದರು. ಅದನ್ನು ಗಂಭೀರವಾಗಿ ಪರಿಗಣಿಸಿದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು, ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಬಿಬಿಎಂಪಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ್ದರು.
ವೈದ್ಯರ ಲೋಪ ಪತ್ತೆಯಾಗಿಲ್ಲ?: ಇನ್ನು ಘಟನೆಯಲ್ಲಿ ಅಸ್ವಸ್ಥಗೊಂಡಿದ್ದ ಭಾನುರೇಖಾರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಆಟೋದಲ್ಲಿ ಕರೆದೊಯ್ಯಲಾಗಿತ್ತು. ಯುವತಿ ಆಟೋದಲ್ಲಿ ಇದ್ದಾಗಲೇ ಕೆಲವೊಂದು ಪರೀಕ್ಷೆ ನಡೆಸಿದ್ದಾರೆ. ಆಗಲೇ ಆಕೆ ಮೃತಪಟ್ಟಿದ್ದಾರೆ. ಹೀಗಾಗಿ ಒಳಗಡೆ ದಾಖಲಿಸಿಕೊಳ್ಳಲು ನಿರಾಕರಿಸಲಾಗಿತ್ತು ಎಂದು ಆಸ್ಪತ್ರೆ ವೈದ್ಯರು ಹೇಳುತ್ತಿದ್ದಾರೆ. ಆಟೋದಲ್ಲೇ ಆಕೆಯ ಕಣ್ಣಿಗೆ ಟಾರ್ಚ್ ಬಿಟ್ಟು ನೋಡಲಾಗಿತ್ತು. ಒಂದು ವೇಳೆ ಆಕೆ ಸ್ಪಂದಿಸುತ್ತಿದ್ದರೆ, ಮೆದುಳು ನಿಷ್ಕ್ರಿಯಗೊಂಡಿಲ್ಲ ಎಂದು ಹೇಳಲಾಗುತ್ತದೆ. ಆದರೆ, ಅಂದು ಆಕೆಯ ಕಣ್ಣುಗಳಿಗೆ ಟಾರ್ಚ್ ಬಿಟ್ಟು ನೋಡಿದಾಗ ಆಕೆ ಪ್ರತಿಕ್ರಿಯಿಸಲಿಲ್ಲ. ಜತೆಗೆ ಇಸಿಜಿ ಯಂತ್ರದಿಂದಲೂ ಪರೀಕ್ಷಿಸಿದಾಗ ಸ್ಪಂದನೆ ಇರಲಿಲ್ಲ. ಈ ರೀತಿ ಎಲ್ಲ ಪ್ರಕ್ರಿಯೆ ಮಾಡಲಾಗಿದೆ. ಅಂದರೆ ಆಟೋದಲ್ಲೇ ಆಕೆ ಮೃತಪಟ್ಟಿದ್ದರು. ಆದರೂ ಸ್ಥಳೀಯರು ಆಕ್ರೋಶಗೊಂಡಿದ್ದರಿಂದ ದಾಖಲಿಸಿಕೊಳ್ಳಲಾಗಿತ್ತು ಎಂದು ವೈದ್ಯರು ಹೇಳುತ್ತಿದ್ದಾರೆ. ಇನ್ನು ಆಸ್ಪತ್ರೆಯ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಪರೀಶೀಲಿಸಲಾಗಿದೆ. ಘಟನೆ ದಿನ ಕರ್ತವ್ಯ ನಿರ್ವಹಿಸಿದ ವೈದ್ಯರ ವಿಚಾರಣೆ ನಡೆಸಬೇಕಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.