ನವದೆಹಲಿ: ಸಂಸತ್ತಿನ ಭದ್ರತಾ ಲೋಪಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸೃಷ್ಟಿಸಿದ ನೀತಿಗಳೇ ಕಾರಣ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಪ್ರಧಾನಿ ಮೋದಿಯವರ ನೀತಿಗಳಿಂದ ದೇಶದ ನಾಗರಿಕರಿಗೆ ಉದ್ಯೋಗ ಸಿಗುತ್ತಿಲ್ಲ. ಇದರಿಂದ ಯುವಜನರು ಹತಾಶರಾಗಿದ್ದಾರೆ, ಇದರಿಂದ ರೋಸಿ ಹೋದ ಯುವಕರು ಈ ರೀತಿಯಾಗಿ ದಾಳಿಗೆ ಮುಂದಾಗುತ್ತಾರೆ ಎಂದು ಹೇಳಿದರು.
“ಭದ್ರತಾ ಉಲ್ಲಂಘನೆ ನಡೆದಿರುವುದು ಎಲ್ಲರೂ ಒಪ್ಪಬೇಕು ಆದರೆ ಇದು ಏಕೆ ಸಂಭವಿಸಿತು ಎಂಬುದನ್ನು ನಾವು ಯೋಚಿಸಬೇಕಾಗಿದೆ ಇಲ್ಲಿರುವ ಮುಖ್ಯ ವಿಷಯವೆಂದರೆ ನಿರುದ್ಯೋಗ. ಮೋದಿ ಜಿ ಅವರ ನೀತಿಗಳಿಂದಾಗಿ ಭಾರತದ ಜನರಿಗೆ ಉದ್ಯೋಗ ಸಿಗುತ್ತಿಲ್ಲ” ಎಂದು ಕೇಂದ್ರ ಸರಕಾರದ ವಿರುದ್ಧ ಗುಡುಗಿದರು.
ಸಂಸತ್ತಿನ ಭದ್ರತಾ ಉಲ್ಲಂಘನೆಯನ್ನು ವಿರೋಧ ಪಕ್ಷಗಳು ರಾಜಕೀಯಗೊಳಿಸುತ್ತಿವೆ ಎಂಬ ಷಾ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಅಮಿತ್ ಶಾ ಅವರು ಮಾಧ್ಯಮಗಳೊಂದಿಗೆ ಮಾತ್ರ ಮಾತನಾಡುತ್ತಾರೆ ಆದರೆ ಸದನದಲ್ಲಿ ಈ ವಿಷಯದ ಬಗ್ಗೆ ಹೇಳಿಕೆ ನೀಡುವುದಿಲ್ಲ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ: Dandeli: ರಕ್ಷಣೆಗಾಗಿ ದ್ವಿಚಕ್ರ ವಾಹನದಲ್ಲಿ ಅವಿತಿದ್ದ ಮುಂಗುಸಿ ರಕ್ಷಿಸಿದ ಉರಗ ಪ್ರೇಮಿ