Advertisement

ಅಘೋಷಿತ ಬಂದ್‌, ಬಿಗಿ ಬಂದೋಬಸ್ತ್

06:00 AM Nov 26, 2018 | Team Udayavani |

ಮಂಡ್ಯ: ಅಂಬರೀಶ್‌ ಸಾವಿನ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಾದ್ಯಂತ ಅಘೋಷಿತ ಬಂದ್‌ ವಾತಾವರಣ ನಿರ್ಮಾಣವಾಗಿದ್ದು, ವರ್ತಕರು ಭಾನುವಾರ ಸ್ವಯಂಪ್ರೇರಿತರಾಗಿ ಅಂಗಡಿ ಬಾಗಿಲು ಮುಚ್ಚಿದ್ದರು. 

Advertisement

ಜತೆಗೆ, ನೆಚ್ಚಿನ ನಾಯಕನ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ಕರೆ ತರುವಂತೆ, ಸ್ವಗ್ರಾಮ ದೊಡ್ಡರಸಿನಕೆರೆಯಲ್ಲಿ ಅಂತ್ಯಕ್ರಿಯೆ ನಡೆಸುವಂತೆ ಅಭಿಮಾನಿಗಳು ಅಲ್ಲಲ್ಲಿ ರಸ್ತೆ ತಡೆ ನಡೆಸಿದರು. ಚಿತ್ರಮಂದಿರಗಳಲ್ಲಿ ಪ್ರದರ್ಶನ ರದ್ದು ಪಡಿಸಲಾಗಿದ್ದು, ಪ್ರಮುಖ ರಸ್ತೆಗಳಲ್ಲಿ ವಾಹನಗಳ ಸಂಚಾರ ವಿರಳವಾಗಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

ಅಂಬರೀಶ್‌ ಪಾರ್ಥಿವ ಶರೀರದ ದರ್ಶನಕ್ಕಾಗಿ ಜಿಲ್ಲೆಯ ಜನರನ್ನು ಕರೆದೊಯ್ಯಲು ಬೆಂಗಳೂರಿಗೆ ಸಾರಿಗೆ ಬಸ್‌ಗಳನ್ನು ಬಿಡಲಾಗಿತ್ತು. ಬಹುತೇಕ ಖಾಸಗಿ ಬಸ್‌ಗಳು ಸಂಚಾರವನ್ನು ಸ್ಥಗಿತಗೊಳಿಸಿದ್ದವು. ಇದರ ಪರಿಣಾಮ ಬಸ್‌ಗಳ ಕೊರತೆಯಿಂದ ಪ್ರಯಾಣಿಕರು ದೂರದ ಊರುಗಳಿಗೆ ತೆರಳಲು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಈ ಮಧ್ಯೆ, ಅಂಬರೀಶ್‌ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ತರುವಂತೆ ಒತ್ತಾಯಿಸಿ ಅಭಿಮಾನಿಗಳು ಮಂಡ್ಯ ಜಯಚಾಮರಾಜೇಂದ್ರ ಒಡೆಯರ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಹೆದ್ದಾರಿಯಲ್ಲಿ ವಾಹನ ತಡೆದು ಪ್ರತಿಭಟನೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next