Advertisement
ತಹಶೀಲ್ದಾರ್ ಸಾಮನ್ಯ ಸಭೆಗಳಿಗೆ ನಿರಂತರ ಗೈರು ಹಾಜರಾಗುತ್ತಿದ್ದಾರೆ. ಹೀಗಾಗಿ ತಾಲ್ಲೂಕಿನ ಅಭಿವೃದ್ದಿ ಕಾರ್ಯಗಳು ಕುಂಠಿತಗೊಳ್ಳುತ್ತಿದೆ. ಮಳೆಗಾಲದ ಕ್ರಮವಾಗಿ ಹಲವು ವಿಚಾರಗಳ ಬಗ್ಗೆ ಚರ್ಚಿಸಬೇಕಾಗಿತ್ತು. ಆದರೆ ಸಮಸ್ಯೆ ಬಗೆಹರಿಸಲು ಮುಖ್ಯವಾಗಿ ಬೇಕಾದ ತಹಶೀಲ್ದಾರ್‌ರವರ ಗೈರಿನಿಂದ ಸಭೆಯ ಪ್ರಾಮುಖ್ಯತೆ ಕಳೆದುಕೊಳ್ಳುತ್ತದೆ. ಹೀಗಾಗಿ ಸಾಮಾನ್ಯ ಸಭೆಗೆ ತಹಶೀಲ್ದಾರ್ ಹಾಜರಾಗಲೇ ಬೇಕು ಸದಸ್ಯರು ಎಂದು ಒತ್ತಾಯಿಸಿದರು. ಪೊನ್ನಂಪೇಟೆ ಸಾಮಾರ್ಥ್ಯ ಸೌಧ ಸಭಾಂಗಣದಲ್ಲಿ ತಾ.ಪಂ. ಅಧ್ಯಕ್ಷ ಬೊಳ್ಳಚಂಡ ಸ್ಮಿತಾ ಪ್ರಕಾಶ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಾಮಾನ್ಯ ಸಭೆಯನ್ನು ಕರೆಯಲಾಗಿತ್ತು. ಕಂದಾಯ ಇಲಾಖೆಯಲ್ಲಿ ಹಲವು ಸಮಸ್ಯೆಗಳ ಬಗ್ಗೆ ಬಹಳಷ್ಟು ಸದಸ್ಯರಿಗೆ ಪ್ರಶ್ನಿಸಬೇಕಾಗಿತ್ತು. ಅಲ್ಲದೆ ಕಳೆದ ಬಾರಿಯ ಅತೀವೃಷ್ಟಿಯಿಂದ ಉಂಟಾದ ಮಳೆಹಾನಿ ಪರಿಹಾರ, ಪಡಿತರ ಚೀಟಿ ವಿತರಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಾಗಿತು. ಆದರೆ ಸಮಸ್ಯೆ ಬಗೆಹರಿಸಲು ತಾಲೂಕು ದಂಡಾಧಿಕಾರಿಗಳೇ ಗೈರಾಗಿರುವುದರಿಂದ ಅಸಮಾಧಾನ ಗೊಂಡ ತಾ.ಪಂ. ಸದಸ್ಯರು ಸಭೆಯನ್ನು ಮುಂದೂಡುವಂತೆ ಅಧ್ಯಕ್ಷರಲ್ಲಿ ಮನವಿ ಸಲ್ಲಿಸಿದರು. ತಕ್ಷಣವೇ ಇದಕ್ಕೆ ಸ್ಪಂದಿಸಿದ ಅಧ್ಯ ಕ್ಷರು ಕಾರ್ಯನಿರ್ವಹಣಾಧಿಕಾರಿಗಳ ಮೂಲಕ ತಹಶೀಲ್ದಾರ್‌ರವರಿಗೆ ಸಭೆಗೆ ಹಾಜರಾಗವಂತೆ ತಿಳಿಸಲು ದೂರವಾಣಿ ಕರೆ ಮಾಡಿದರೂ ಕರೆ ಸ್ವೀಕರಿಸುತ್ತಿರಲಿಲ್ಲ. ಈ ಘಟನೆಯಿಂದ ಮತ್ತಷ್ಟು ಅಸಮಾಧಾನಗೊಂಡ ಸದಸ್ಯರು ಸಭೆಯನ್ನು ಮುಂದೂಡು ವಂತೆ ಒತ್ತಾಯಿಸಿದರು. ಕಾರ್ಯನಿರ್ವಹಣಾಧಿಕಾರಿ ಜಯಣ್ಣನವರು ಜಿಲ್ಲಾ ಉಪವಿಭಾಗಾಧಿಕಾರಿಯವರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದರು. ಆದರೂ ತಹಶೀಲ್ದಾರ್ ಸಭೆ ಹಾಜರಾಗˆˆದ ಕಾರಣ ಸಭೆಯನ್ನು ಸರ್ವ ಸದಸ್ಯರು ಬಹಿಷ್ಕರಿಸಿದರು.
Advertisement
ದಂಡಾಧಿಕಾರಿ ವಿರುದ್ಧ ಅಸಮಾಧಾನ ತಾ. ಪಂ.ಸಭೆಗೆೆ ಬಹಿಷ್ಕಾರ
12:35 AM Jun 13, 2019 | sudhir |
Advertisement
Udayavani is now on Telegram. Click here to join our channel and stay updated with the latest news.