ನಿರ್ದೇಶಕ ಡಾ| ಎ. ಸುಬ್ಬುರಾಜ್ ಆತಂಕ ವ್ಯಕ್ತಪಡಿಸಿದರು.
Advertisement
ಜಿಪಂ ಸಭಾಂಗಣದಲ್ಲಿ ಗುರುವಾರ ಭಾರತ ಸರ್ಕಾರ ಜಲಸಂಪನ್ಮೂಲ, ನದಿ ಅಭಿವೃದ್ಧಿ ಮತ್ತು ಗಂಗಾ ಪುನಶ್ಚೇತನ ಮಂತ್ರಾಲಯದ ಕೇಂದ್ರೀಯ ಅಂತರ್ಜಲ ಮಂಡಳಿ ಬೆಂಗಳೂರು ವತಿಯಿಂದ ಆಯೋಜಿಸಿದ್ದ ಸ್ಥಳೀಯ ಅಂತರ್ಜಲ ಸಮಸ್ಯೆಗಳ ನಿರ್ವಹಣೆ ಕುರಿತಾದ ತರಬೇತಿಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅವೈಜ್ಞಾನಿಕ ನೀರು ಬಳಕೆಯಿಂದ ಮುಂದಿನ ದಿನಗಳಲ್ಲಿ ಸಮಸ್ಯೆ ಎದುರಿಸಬೇಕಾಗುತ್ತದೆ. ಆದ್ದರಿಂದ ಅಂತರ್ಜಲ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಕಾರ್ಯವಾಗಿದೆ. ಇಂದಿನ ಆಧುನಿಕ ಯುಗದ ಭರಾಟೆಯಲ್ಲಿ ನಗರೀಕರಣ ಹಾಗೂ ಕೈಗಾರೀಕರಣದಿಂದಾಗಿ ಪರಿಸರ ಮಲೀನ ಆಗುತ್ತಿದೆ. ಅದರಲ್ಲಿ ಮುಖ್ಯವಾಗಿ ಜೀವ ಜಲ ಮಾಲಿನ್ಯ ಆಗುತ್ತಿದ್ದು, ಇದರಿಂದ ಭೂಮಿಯ ಮೇಲಿನ ಸಿಹಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ ಎಂದು ತಿಳಿಸಿದರು. ಕರ್ನಾಟಕ ರಾಜ್ಯದಲ್ಲಿ 14.89 ಬಿಲಿಯನ್ ಕ್ಯೂಬಿಕ್ ಅಂತರ್ಜಲ ಪ್ರಮಾಣ ಇದೆ. ಶೇ. 15ರಿಂದ 20ರಷ್ಟು ನೀರು ಮಾತ್ರ
ಭೂಮಿಯಲ್ಲಿ ಇಂಗುತ್ತದೆ. ಯಾದಗಿರಿ ಜಿಲ್ಲೆಯಲ್ಲಿ ಕಾಲುವೆ ನೀರಾವರಿ ಹೆಚ್ಚಾಗಿರುವುದರಿಂದ ಈ ಭಾಗದ ಅಂತರ್ಜಲ ಮಟ್ಟವು ತಕ್ಕಮಟ್ಟಿಗೆ ಉತ್ತಮವಾಗಿದೆ ಎಂದು ತಿಳಿಸಿದರು.