ಬೆಂಗಳೂರು: ಮುಂದಿನ ಸೋಮವಾರದಿಂದ ಆರಂಭವಾಗಲಿರುವ ಎಸ್ಎಸ್ಎಲ್ ಸಿ ಮುಖ್ಯ ಪರೀಕ್ಷೆಗೆ ವಿದ್ಯಾರ್ಥಿಗಳು ಸಮವಸ್ತ್ರದೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಈ ಮೂಲಕ ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಂತಿಲ್ಲ ಎಂದು ಆದೇಶ ಹೊರಡಿಸಿದೆ.
ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಯು ಮಾರ್ಚ್ 28ರಿಂದ ಎಪ್ರಿಲ್ 11ರವರೆಗೆ ನಡೆಯಲಿದೆ.
ಇದನ್ನೂ ಓದಿ:ಕೊಲೆ ಪ್ರಕರಣದ ಆರೋಪಿ ಜೈಲಲ್ಲಿದ್ದೇ ಐಐಟಿ Rank ಪಡೆದ..ವಿಜ್ಞಾನಿಯಾಗುವ ಕನಸು ಈತನದ್ದು!
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಶಾಲಾ ಸಮವಸ್ತ್ರವನ್ನು ವಿದ್ಯಾರ್ಥಿಗಳು ಕಡ್ಡಾಯವಾಗಿ ಧರಿಸಬೇಕು. ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿ ನಿರ್ಧರಿಸುವ ಸಮವಸ್ತ್ರವನ್ನು ವಿದ್ಯಾರ್ಥಿಗಳು ಧರಿಸತಕ್ಕದ್ದು ಎಂದು ಆದೇಶಿಸಲಾಗಿದೆ.
ಯಾವುದಕ್ಕೆಲ್ಲ ಅವಕಾಶವಿಲ್ಲ?
ಪರೀಕ್ಷಾ ಕೊಠಡಿಯ ಒಳಗೆ ಮೊಬೈಲ್, ಸ್ಮಾರ್ಟ್ ವಾಚ್, ಕೆಮರಾ, ಅತ್ಯಾಧುನಿಕ ಕ್ಯಾಲ್ಕುಲೇಟರ್ ಸಹಿತವಾಗಿ ಯಾವುದೇ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ಕೊಂಡೊಯ್ಯಲು ಅವಕಾಶ ಇಲ್ಲ. ಪರೀಕ್ಷಾ ಕೇಂದ್ರದ ಮೊಬೈಲ್ ಸ್ವಾಧೀನ ಅಧಿಕಾರಿಗಳು ಮೇಲ್ವಿಚಾರಣೆ ಮಾಡಲಿದ್ದಾರೆ.