Advertisement

ವಿವಾದದ ನಡುವೆಯೇ ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿದ ಸರಕಾರ

06:44 PM Feb 05, 2022 | Team Udayavani |

ಬೆಂಗಳೂರು: ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಗಿಲೆದ್ದ  ಹಿಜಾಬ್ ವಿವಾದಕ್ಕೆ ಸರಕಾರ ತಾರ್ಕಿಕ ಅಂತ್ಯ ನೀಡುವುದಕ್ಕೆ ಮುಂದಾಗಿದ್ದು, ಎಲ್ಲ ಸರಕಾರಿ, ಖಾಸಗಿ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರವನ್ನು ಕಡ್ಡಾಯಗೊಳಿಸಿ ಆದೇಶ ಪ್ರಕಟಿಸಲಾಗಿದೆ.

Advertisement

ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ವಸ್ತ್ರ ಸಂಹಿತೆ ನಿಗದಿಗೆ ಸಂಬಂಧಪಟ್ಟಂತೆ ಶಿಕ್ಷಣ ಇಲಾಖೆಯಿಂದ ಶನಿವಾರ ಸಂಜೆ ಆದೇಶ ಪ್ರಕಟಿಸಲಾಗಿದೆ. ಸಮವಸ್ತ್ರಕ್ಕೆ ಸಂಬಂಧಪಟ್ಟಂತೆ ನಾನಾ ರಾಜ್ಯಗಳ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಆಧರಿಸಿ ಈ ಆದೇಶವನ್ನು ಸಿದ್ದಪಡಿಸಲಾಗಿದ್ದು, ಶಾಲಾ ಅಭಿವೃದ್ಧಿ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ನಿಗದಿ ಮಾಡಿದ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸುವಂತೆ ಆದೇಶಿಸಲಾಗಿದೆ. ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿ ನಿರ್ಧರಿಸಿದ ಸಮವಸ್ತ್ರವನ್ನೇ ಧರಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಪದವಿಪೂರ್ವ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿನ ಕಾಲೇಜುಗಳಲ್ಲಿ ಆಯಾ ಕಾಲೇಜು ಅಭಿವೃದ್ಧಿ ಮಂಡಳಿ ಮೇಲ್ವಿಚಾರಣಾ ಸಮಿತಿ  ನಿಗದಿಪಡಿಸಿದ ಸಮವಸ್ತ್ರವನ್ನೇ ಧರಿಸಬೇಕು.  ಸಮವಸತ್ರವನ್ನು ನಿಗದಿ ಪಡಿಸದೇ ಇದ್ದಲ್ಲಿ, ಸಮಾನತೆ ಹಾಗೂ ಐಕ್ಯತೆಯನ್ನು ಕಾಪಾಡಿಕೊಳ್ಳುವುದು ಕಷ್ಟವಾಗುತ್ತದೆ. ಹೀಗಾಗಿ ಸರ‍್ವಜನಿಕ ಸುವ್ಯವಸ್ಥೆಗೆ ಭಂಗ ಬರದೇ ಇರುವಂಥ ಉಡುಪುಗಳನ್ನು ಧರಿಸುವುದು ಸೂಕ್ತ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಹಿಜಾಬ್ ಧರಿಸದೇ ಶಾಲೆಗೆ ಬರುವಂತೆ ನಿರ್ದೇಶಿಸುವುದು ಸಂವಿಧಾನದ 25 ನೇ ಅನುಚ್ಛೇದದ ಉಲ್ಲಂಘನೆಯಾಗುವುದಿಲ್ಲ ಎಂದು ಈಗಾಗಲೇ ಪ್ರಮಾಣಿತವಾಗಿದ್ದು,ಕರ್ನಾಟಕ ಶಿಕ್ಷಣ ಕಾಯಿದೆ-1983ರ ಅನ್ವಯ ರಚಿತವಾದ ನಿಯಮಗಳ ಉಲ್ಲಂಘನೆಯಾಗುವುದಿಲ್ಲ ಎಂದು ಪ್ರತಿಪಾದಿಸಿರುವ ಇಲಾಖೆ ಸಮವಸ್ತ್ರವನ್ನು ಕಡ್ಡಾಯಗೊಳಿಸಿದೆ. ಇದರೊಂದಿಗೆ ಕಳೆದ ಕೆಲದ ಇನಗಳಿಂದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿದ್ದ ಹಿಜಾಬ್ ವಿವಾದಕ್ಕೆ ತೆರೆ ಬಿದ್ದಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next