Advertisement
ಜಿಲ್ಲಾ ಬಿಜೆಪಿ ಕಚೇರಿಗೆ ಸೋಮ ವಾರ ಭೇಟಿ ನೀಡಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಇಂಗ್ಲಿಷ್ ಇಲ್ಲ ಎಂಬ ಕಾರಣಕ್ಕಾಗಿ ಸರಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಎಂಬ ವಾದ ಸರಿಯಲ್ಲ. ಅದಕ್ಕೆ ಬೇರೆ ಬೇರೆ ಕಾರಣಗಳು ಕೂಡ ಇವೆ. ಸರಕಾರ ಈಗ ಒಂದು ಸಾವಿರ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಬೇಕೆಂಬ ಉದ್ದೇಶವನ್ನು ಹೊಂದಿದೆ. ಈ ವಿಚಾರದಲ್ಲಿ ಗೊಂದಲ ಸೃಷ್ಟಿಸಲು ಹಲವರು ಕಾಯುತ್ತಿರುವುದರಿಂದ ಅದನ್ನು ಯಾವ ರೀತಿ ಮಾಡಬೇಕೆಂಬ ಬಗ್ಗೆ ಯೋಚನೆ ಮಾಡಲಾಗಿದೆ ಎಂದು ಅವರು ಹೇಳಿದರು.
ಹೊರಗೆ ಶ್ಲಾಘನೆ, ಊರಿನಲ್ಲಿ ವಿರೋಧ! ಮಕ್ಕಳ ನ್ಯೂನತೆ ಮತ್ತು ಕೊರತೆಗಳನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದು ಅಕ್ಷಮ್ಯ. ಶಾಲಾ ಅವಧಿಯಲ್ಲಿ ಶಿಕ್ಷಕರು ಮೊಬೈಲ್ ಬಳಕೆ ಮಾಡಬಾರದು ಎಂದು ಸುತ್ತೋಲೆ ಹೊರಡಿಸಲಾಗಿದೆ ಎಂದು ಹೇಳಿದ ಸುರೇಶ ಕುಮಾರ್, ಉತ್ತರ ಕರ್ನಾಟಕದ ಶಾಲೆಯೊಂದರಲ್ಲಿ “ಪಕ್ಕೆಲುಬು’ ಪ್ರಕರಣದ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿರುವ ಶಿಕ್ಷಕನನ್ನು ಅಮಾನತುಗೊಳಿಸಿರುವ ಬಗ್ಗೆ ಎಲ್ಲೆಡೆಗಳಿಂದ ಮೆಚ್ಚುಗೆ ವ್ಯಕ್ತವಾದರೆ ಅಲ್ಲಿನ ಗ್ರಾಮಸ್ಥರು ಮಾತ್ರ ಪ್ರತಿಭಟಿಸುತ್ತಿದ್ದಾರೆ. ಅಮಾನತು ಆದೇಶ ಹಿಂಪಡೆಯದಿದ್ದರೆ ಶಾಲೆ ತೆರೆಯಲು ಬಿಡುವುದಿಲ್ಲ ಎಂದು ಧರಣಿ ನಡೆಸುತ್ತಿದ್ದಾರೆ. ಇದೊಂದು ವಿಚಿತ್ರ ಸನ್ನಿವೇಶ ಎಂದರು.
Related Articles
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸುವುದರಿಂದ ಅಂಗನವಾಡಿ ಗಳಿಗೆ ತೊಂದರೆ ಆಗದು. ಅಂಗನವಾಡಿ ನೌಕರರ ಕೆಲಸ ಪೌಷ್ಟಿಕ ಆಹಾರ ಕೊಡುವುದಾದರೆ, ಎಲ್‌ಕೆಜಿ ಯುಕೆಜಿ ಕೆಲಸ ಶಿಕ್ಷಣ ನೀಡುವುದಾಗಿದೆ ಎಂದರು.
Advertisement
ಸಚಿವರು ಏನೆಂದರು?– ನಾವು ಎಲ್‌ಕೆಜಿ, ಯುಕೆಜಿ ಆರಂಭಿಸದಿದ್ದರೆ ಸರಕಾರಿ ಶಾಲೆಗಳಿಗೆ ಮಕ್ಕಳೇ ಬರುವುದಿಲ್ಲ. ಇದು ಮಕ್ಕಳನ್ನು ಆಕರ್ಷಿಸುವ ತಾಣ.
– ಒಂದನೇ ತರಗತಿಯಿಂದ ನೀಡುವ ನಲಿಕಲಿ ಪಾಠವನ್ನು ಎಲ್‌ಕೆಜಿ, ಯುಕೆಜಿಯಲ್ಲೂ ಆರಂಭಿಸಲು ತರಬೇತಿ ಪಡೆದ ಶಿಕ್ಷಕರ ಅಗತ್ಯವಿದೆ. ಆ ರೀತಿ ತರಬೇತಿಯನ್ನು ಅಂಗನವಾಡಿ ನೌಕರರಿಗೆ ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಸಾಧ್ಯವೇ ಎಂಬ ಬಗ್ಗೆ ಚರ್ಚಿಸಲಾಗುವುದು.
– ಶಾಲಾ ಕಟ್ಟಡ, ಕಲಿಕೆಯ ಗುಣಮಟ್ಟ ಹೆಚ್ಚಿಸುವ ಮೂಲಕ ಸರಕಾರಿ ಶಾಲೆಗಳ ಸಬಲೀಕರಣಕ್ಕೆ ಯೋಜನೆ ಹಾಕಿಕೊಳ್ಳಲಾಗಿದೆ. ಆಂಗ್ಲ ಮಾಧ್ಯಮ ಶಾಲೆ ಹೆಚ್ಚಿಸಲು ನಿರ್ಧರಿಸಿಲ್ಲ.