Advertisement

ಪಿಯು ಪರೀಕ್ಷೆಗೂ ಸಮವಸ್ತ್ರ ಕಡ್ಡಾಯ : ಪದವಿಪೂರ್ವ ಶಿಕ್ಷಣ ಇಲಾಖೆ ಆದೇಶ

09:48 PM Apr 07, 2022 | sudhir |

ಬೆಂಗಳೂರು : ಎಸೆಸೆಲ್ಸಿಯಂತೆ ದ್ವಿತೀಯ ಪಿಯುಸಿ ಪರೀಕ್ಷೆಗೂ ಸರಕಾರ ವಸ್ತ್ರ ಸಂಹಿತೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.

Advertisement

ಒಂದು ವೇಳೆ ಕಾಲೇಜುಗಳಲ್ಲಿ ಸಮವಸ್ತ್ರ ನಿಗದಿ ಮಾಡದಿದ್ದರೆ, ಸಮಾನತೆ ಮತ್ತು ಏಕತೆಯನ್ನು ಕಾಪಾಡುವ ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬಾರದಂಥ ಉಡುಪುಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗುವಂತೆ ಪದವಿಪೂರ್ವ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಪದ್ಮಿನಿ ಎಸ್‌.ಎನ್‌. ಆದೇಶದಲ್ಲಿ ತಿಳಿಸಿದ್ದಾರೆ.

ಪದವಿ ಪೂರ್ವ ಶಿಕ್ಷಣ ಇಲಾಖೆ ವ್ಯಾಪ್ತಿಯ ಕಾಲೇಜುಗಳಲ್ಲಿ ಆಯಾ ಕಾಲೇಜು ಅಭಿವೃದ್ಧಿ ಸಮಿತಿ (ಸಿಡಿಸಿ) ಅಥವಾ ಆಡಳಿತ ಮಂಡಳಿ ಮೇಲ್ವಿಚಾರಣ ಸಮಿತಿ ನಿರ್ಧರಿಸಿರುವಂತಹ ಸಮವಸ್ತ್ರಗಳನ್ನು ಧರಿಸಿ ಹಾಜರಾಗಬೇಕು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ : ಸಿನೆಮಾ ರಂಗದ ಆಸೆ ಹುಟ್ಟಿಸಿ ದುಬಾೖಗೆ ಮಹಿಳಾ ಕಳ್ಳ ಸಾಗಾಣಿಕೆ: ನಾಲ್ವರ ಬಂಧನ

Advertisement

Udayavani is now on Telegram. Click here to join our channel and stay updated with the latest news.

Next