ನವದೆಹಲಿ: 2021-22ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ(ಫೆ.1, 2021) ಲೋಕಸಭೆಯಲ್ಲಿ ಮಂಡಿಸಿದ್ದು, ಈ ಬಾರಿ ರೈಲ್ವೆ ಕ್ಷೇತ್ರಕ್ಕೆ 1,10,055 ಕೋಟಿ ಬೃಹತ್ ಮೊತ್ತವನ್ನು ಘೋಷಿಸಿದ್ದಾರೆ. ಅಲ್ಲದೇ 1,07,100 ಕೋಟಿ ರೂಪಾಯಿ ಬಂಡವಾಳ ವೆಚ್ಚಕ್ಕೆ ಮೀಸಲಿಡಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:
ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ಬೆಂಗಳೂರು ಮೆಟ್ರೋ ರೈಲು ಅಭಿವೃದ್ಧಿಗೆ 14 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಬೆಂಗಳೂರು ಮೆಟ್ರೋ 2ಎ ಹಾಗೂ 2ಬಿ ಯೋಜನೆಗೆ 14,788 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿರುವುದಾಗಿ ಘೋಷಿಸಿದ್ದಾರೆ.
3.3 ಲಕ್ಷ ಕೋಟಿ ವೆಚ್ಚದಲ್ಲಿ 13 ಸಾವಿರ ಕಿಲೋ ಮೀಟರ್ ಉದ್ದದ ರಸ್ತೆ ನಿರ್ಮಾಣಕ್ಕೆ ಈಗಾಗಲೇ 5.35 ಲಕ್ಷ ಕೋಟಿ ಭಾರತ್ ಮಾಲಾ ಯೋಜನೆಯಡಿ ಹಣ ಬಿಡುಗಡೆ ಮಾಡಲಾಗಿದೆ. ಇದರಲ್ಲಿ 3,800 ಕಿಲೋ ಮೀಟರ್ ನಿರ್ಮಾಣವಾಗಿದೆ.
ಸ್ವಯಂ ಚಾಲಿತ ರೈಲ್ವೆಗೆ ಕೇಂದ್ರ ಸರ್ಕಾರ ಆದ್ಯತೆ ನೀಡಿದ್ದು, ಬ್ರಾಡ್ ಗೇಜ್ ನಲ್ಲಿ ವಿದ್ಯುತ್ ಚಾಲಿತ ಯೋಜನೆ ಪೂರ್ಣಗೊಂಡಿದೆ. 46 ಸಾವಿರ ಕಿಲೋ ಮೀಟರ್ ರೈಲ್ವೆ ಮಾರ್ಗವನ್ನು ವಿದ್ಯುದ್ದೀಕರಣ ಮಾಡಲಾಗಿದೆ ಎಂದು ತಿಳಿಸಿದರು.
2023ರ ಡಿಸೆಂಬರ್ ನೊಳಗೆ ಬ್ರಾಡ್ ಗೇಜ್ ಅನ್ನು ಶೇ.100ರಷ್ಟು ವಿದ್ಯುದ್ದೀಕರಣ ಮಾಡುವುದಾಗಿ ತಿಳಿಸಿರುವ ನಿರ್ಮಲಾ ಸೀತಾರಾಮನ್, ಪಿಪಿಪಿ ಮೂಲಕ ರೈಲ್ವೆ ನಿಲ್ದಾಣಗಳಿಗೆ ತೆರಳಲು ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಲು ಯೋಜನೆ ಸಿದ್ದಪಡಿಸಲಾಗಿದೆ.