ನವದೆಹಲಿ: ಪ್ರಸಕ್ತ ಸಾಲಿನ 2021-22ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಸೋಮವಾರ(ಫೆ.1, 2021) ಲೋಕಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದು, ಈ ಬಾರಿಯೂ ವೈಯಕ್ತಿಕ ತೆರಿಗೆದಾರರಿಗೆ ನಿರಾಸೆ ಮೂಡಿಸಿದೆ. ಆದಾಯ ತೆರಿಗೆ ವಿನಾಯ್ತಿ ಮಿತಿಯಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿ ಮುಂದುವರಿಸಿದೆ.
Advertisement
ವೇತನದಾರರ ವೈಯಕ್ತಿಕ ಆದಾಯ ತೆರಿಗೆಯಲ್ಲಿ ಈ ವರ್ಷವೂ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಯಾವುದೇ ರಿಲೀಫ್ ನೀಡಿಲ್ಲ. ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ವಿನಾಯ್ತಿ ನೀಡಿಲ್ಲ ಎಂದು ವಿಶ್ಲೇಷಿಸಲಾಗಿದೆ.