ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ (ಫೆ.01) ಲೋಕಸಭೆಯಲ್ಲಿ ಮಂಡಿಸಿರುವ 2023-24ನೇ ಸಾಲಿನ ಬಜೆಟ್ ನಲ್ಲಿ ಪ್ರಧಾನ್ ಮಂತ್ರಿ ಆವಾಸ್ ಯೋಜನೆಗೆ 79 ಸಾವಿರ ಕೋಟಿ ರೂಪಾಯಿ ಹಣವನ್ನು ಘೋಷಿಸಿದ್ದಾರೆ.
ಇದನ್ನೂ ಓದಿ:ಅಮೃತ್ ಕಾಲದ ಮೊದಲ ಬಜೆಟ್ ಸಮಾಜದ ಕನಸುಗಳನ್ನು ಈಡೇರಿಸಲಿದೆ: ಪ್ರಧಾನಿ ಮೋದಿ
2022-23ನೇ ಸಾಲಿನಲ್ಲಿ ಮಂಡಿಸಿದ ಬಜೆಟ್ ನಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಧಾನ್ ಮಂತ್ರಿ ಆವಾಸ್ ಯೋಜನೆಗೆ 48 ಸಾವಿರ ಕೋಟಿ ರೂಪಾಯಿ ಘೋಷಿಸಿದ್ದರು. ಪ್ರಸಕ್ತ ಸಾಲಿನಲ್ಲಿ ಶೇ.66ರಷ್ಟು ಅನುದಾನ ಹೆಚ್ಚಳ ಮಾಡಲಾಗಿದೆ.
ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಡಿ ಈವರೆಗೆ 80 ಲಕ್ಷ ಮಂದಿ ಪ್ರಯೋಜನ ಪಡೆದಿರುವುದಾಗಿ ಸಚಿವೆ ಸೀತಾರಾಮನ್ ಹೇಳಿದರು. 2022ರ ಸೆಪ್ಟೆಂಬರ್ ವರೆಗೆ ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಡಿ 2 ಕೋಟಿ ಮನೆಗಳನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದ್ದಾರೆ.