Advertisement
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಲೋಕಸಭೆಯಲ್ಲಿ ಮಂಡಿಸಿರುವ ಬಜೆಟ್ ನಲ್ಲಿ “ಕರ್ನಾಟಕದ ಮಹತ್ವದ ಭದ್ರಾ ಮೇಲ್ಡಂಡೆ ಯೋಜನೆಗೆ” 5,300 ಕೋಟಿ ರೂಪಾಯಿ ನೆರವು ನೀಡುವುದಾಗಿ ಘೋಷಿಸಿದೆ.
Related Articles
Advertisement
ಕೇಂದ್ರದ ಅನುದಾನಕ್ಕೆ ಸಿಎಂ ಬೊಮ್ಮಾಯಿ ಸಂತಸ:ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ 5,300 ಕೋಟಿ ರೂಪಾಯಿ ಅನುದಾನ ನೀಡಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೃತಜ್ಞತೆ ಸಲ್ಲಿಸಿದ್ದಾರೆ. ಅನುದಾನದ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಈ ಸಾಲಿನ ಕೇಂದ್ರ ಬಜೆಟ್ ನಲ್ಲಿ ರಾಜ್ಯದ ಪ್ರಮುಖ ಯೋಜನೆಯಾದ ಭದ್ರಾ ಮೇಲ್ಡಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ ಘೋಷಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸಮಸ್ತ ಕರ್ನಾಟಕದ ಪರವಾಗಿ ಧನ್ಯವಾದಗಳು ಎಂದು ತಿಳಿಸಿದ್ದಾರೆ.