ರಾಮನಗರ: ಕೆಲ ಸಣ್ಣ ಪುಟ್ಟ ಕಾರ್ಯ ಕ್ರಮಗಳನ್ನು ಹೊರತುಪಡಿಸಿದರೆ, ಕಳೆದ 5 ವರ್ಷಗಳ ಅವಧಿಯಲ್ಲಿ ರಾಮನಗರ ಜಿಲ್ಲೆಗೆ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ದೊರೆತಿರುವ ಮಹ ತ್ವದ ಕೊಡುಗೆಗಳ್ಯಾವುವೂ ಇಲ್ಲವಾಗಿದೆ. ಇದೀಗ ತನ್ನ ಕೊನೆಯ ಬಜೆಟ್‌ನಲ್ಲಾದರೂ ಕೇಂದ್ರ ವಿತ್ತ ಸಚಿವರು ರೇಷ್ಮೆನಾಡಿಗೆ ಮಹತ್ತರ ಕೊಡುಗೆ ನೀಡುವರೇ ಎಂಬ ನಿರೀಕ್ಷೆಯಲ್ಲಿ ಜಿಲ್ಲೆಯ ಜನತೆ ಕೇಂದ್ರ ಬಜೆಟ್‌ನತ್ತ ನಿರೀಕ್ಕೆ ಇಟ್ಟಿದ್ದಾರೆ.
Advertisement
ಬೆಂಗಳೂರು ನಗರಕ್ಕೆ ಹೊಂದಿಕೊಂಡಂತೆ ಇರುವ ರಾಮನಗರ ಜಿಲ್ಲೆಯ ಅಭಿವೃದ್ಧಿಗೆ ಕೇಂದ್ರದಿಂದ ಸಾಕಷ್ಟು ನೆರವು ನಿರೀಕ್ಷಿಸಿದೆ. ನರೇಗಾ, ಜಲಜೀವನ್ ಮಿಷನ್, ಕಿಸಾನ್ ಸಮ್ಮಾನ್ ಮೊದಲಾದ ಸಾರ್ವತ್ರಿಕ ಯೋಜನೆಗಳನ್ನು ಹೊರತುಪಡಿಸಿದರೆ ಜಿಲ್ಲೆಗಾಗಿ ಕೇಂದ್ರ ಸರ್ಕಾರ ನೀಡಿದ ಪ್ರತ್ಯೇಕ ಯೊಜನೆಗಳು ಯಾವುವೂ ಇಲ್ಲವಾಗಿವೆ.
Related Articles
Advertisement
ಸುಸಜ್ಜಿತ ಇಎಸ್‌ಐ ಆಸ್ಪತ್ರೆ ಬೇಕು: ರಾಮನಗರ ಜಿಲ್ಲೆಯಲ್ಲಿ ಬಿಡದಿ, ಹಾರೋಹಳ್ಳಿ ಕೈಗಾರಿಕಾ ಪ್ರದೇಶದ ಜೊತೆಗೆ ಸಣ್ಣ ಪುಟ್ಟ ಕೈಗಾರಿಕೆಗಳು ಇದ್ದು, ಹತ್ತಾರು ಸಾವಿರ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಕಾರ್ಮಿಕರ ಹಿತದೃಷ್ಟಿಯಿಂದ ಜಿಲ್ಲೆಗೆ ಸುಸಜ್ಜಿತ ಇಎಸ್‌ಐ ಆಸ್ಪತ್ರೆ ಅತ್ಯವಶ್ಯಕ ವಾಗಿದೆ. ಕೇಂದ್ರ ಸರ್ಕಾರ ಈ ಬಜೆಟ್‌ನಲ್ಲಾದರೂ ಸುಸಜ್ಜಿತ ಇಎಸ್‌ಐ ಆಸ್ಪತ್ರೆಗೆ ಅನುಮೋದನೆ ನೀಡಿದ್ದೇ ಆದಲ್ಲಿ ಹತ್ತಾರು ಸಾವಿರ ಕಾರ್ಮಿಕ ಕುಟುಂಬಗಳಿಗೆ ನೆರವಾಗಲಿದೆ.
ಕನಕಪುರ-ಚಾಮರಾಜನಗರ ರೈಲ್ವೆಗೆ ಸಿಗುತ್ತ ಅನುಮೋದನೆ
ಜಿಲ್ಲೆಯ ಹಲವು ದಿನಗಳ ಬೇಡಿಕೆಯಾಗಿರುವ ಹೆಜ್ಜಾಲ ಮೂಲಕ ಕನಕಪುರ, ಮಳವಳ್ಳಿ, ಕೊಳ್ಳೇಗಾಲ ಮೂಲಕ ಚಾಮರಾಜನಗರಕ್ಕೆ ಸಂಪರ್ಕ ಕಲ್ಪಿಸುವ ಹೊಸ ರೈಲ್ವೆ ಮಾರ್ಗ ಹತ್ತಾರು ವರ್ಷಗಳಿಂದ ಕೇವಲ ದಾಖಲೆಯಲ್ಲೇ ಉಳಿದಿದ್ದು, ಈ ಯೋಜನೆಗೆ ಈ ಬಾರಿಯ ಬಜೆಟ್‌ನಲ್ಲಾದರೂ ಕೇಂದ್ರ ಸರ್ಕಾರ ಅನುಮೋದನೆ ನೀಡುವುದೇ ಎಂಬುದು ಜನರ ನಿರೀಕ್ಷೆಯಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಿರುವ ಕಾರಣ ಟ್ರಾಮಾ ಸೆಂಟರ್, ಬಿಡದಿಯವರೆಗೆ ಸಬ್‌ಅರ್ಬನ್ ರೈಲ್ವೆ ಯೋಜನೆ ವಿಸ್ತರಣೆ, ಕೇಂದ್ರ ಸರ್ಕಾರದಿಂದ ಜಿಲ್ಲೆಯಲ್ಲಿ ರೇಷ್ಮೆ ಉದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಜವಳಿ ಪಾರ್ಕ್ ನಿರ್ಮಾಣ, ಬೆಂ-ಮೈ ಎಕ್ಸ್‌ಪ್ರೆಸ್ ವೇನಲ್ಲಿ ಕೆಫೆಟೇರಿಯಾ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳಿಗೆ ಈ ಬಾರಿಯ ಬಜೆಟ್‌ನಲ್ಲಿ ಕೇಂದ್ರದ ಅನುಮೋದನೆ ದೊರೆತೀತೆ ಕಾಯ್ದು ನೋಡಬೇಕಿದೆ.
■ ಸು.ನಾ.ನಂದಕುಮಾರ್