ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೊನೆಯ ಬಜೆಟ್ ಗುರುವಾರ (ಫೆ.01) ಮಂಡನೆಯಾಗಲಿದ್ದು, ಕ್ಷಣಗಣನೆ ಆರಂಭಗೊಂಡಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ವಿತ್ತ ಸಚಿವಾಲಯಕ್ಕೆ ಆಗಮಿಸಿದ್ದು, ಬಳಿಕ ಲೋಕಸಭೆಗೆ ಆಗಮಿಸಿದ್ದಾರೆ. ಬೆಳಗ್ಗೆ 11ಗಂಟೆಗೆ ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ.
ಇದನ್ನೂ ಓದಿ:Crime: ಸ್ನೇಹಿತನ ಮೇಲೆ ಅತ್ಯಾಚಾರ ಆರೋಪ ಮಾಡಿ ದೂರು ದಾಖಲಿಸಿದ ಬಿಗ್ ಬಾಸ್ ಸ್ಪರ್ಧಿ
ಇದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್ ಆಗಿದೆ. ಲೋಕಸಭೆ ಚುನಾವಣೆಗೂ ಮುನ್ನ ಮಂಡನೆಯಾಗುತ್ತಿರುವ ಮಧ್ಯಂತರ ಬಜೆಟ್ ನಲ್ಲಿ ಬಂಪರ್ ಘೋಷಣೆಗಳ ನಿರೀಕ್ಷೆ ಹೆಚ್ಚಾಗಿದೆ.
ಮಧ್ಯಂತರ ಬಜೆಟ್ ಈಗ ಮಂಡನೆಯಾಗಲಿದ್ದು, ಲೋಕಸಭೆ ಚುನಾವಣೆ ಬಳಿಕ ನೂತನ ಸರ್ಕಾರ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದೆ. ಈ ಹಿನ್ನೆಲೆಯಲ್ಲಿ ಮಧ್ಯಂತರ ಬಜೆಟ್ ನಲ್ಲಿ ಬೃಹತ್ ಯೋಜನೆಗಳ ಘೋಷಣೆ ಸಾಧ್ಯತೆ ಕಡಿಮೆ ಎಂದು ವಿಶ್ಲೇಷಿಸಲಾಗುತ್ತಿದೆ.
ನಿರ್ಮಲಾ ಸೀತಾರಾಮನ್ ಅವರು ಇಂದು 6ನೇ ಬಜೆಟ್ ಮಂಡಿಸುತ್ತಿದ್ದಾರೆ. 2023ನೇ ಸಾಲಿನ ಬಜೆಟ್ ನಲ್ಲಿ 45,03,097 ಕೋಟಿ ರೂಪಾಯಿ ಗಾತ್ರದ ಬೃಹತ್ ಮೊತ್ತದ ಬಜೆಟ್ ಮಂಡಿಸಿದ್ದರು.