Advertisement

Union Budget: ಸರ್ಕಾರ ಉಳಿಸಲು ಬಜೆಟ್‌: ಡಿ.ಕೆ.ಶಿವಕುಮಾರ್‌

12:39 AM Jul 24, 2024 | Team Udayavani |

ಬೆಂಗಳೂರು: ನಿರ್ಮಲಾ ಸೀತಾರಾಮನ್‌ ಎನ್‌ಡಿಎ ಸರ್ಕಾರ ಉಳಿಸಿಕೊಳ್ಳಲು ಮಂಡಿಸಿದ ಬಜೆಟ್‌ ಇದಾಗಿದೆ. ರಾಜ್ಯಕ್ಕೆ ಯಾವುದೇ ನೆರವು ನೀಡದೆ ನಿರೀಕ್ಷೆಗಳನ್ನು ಹುಸಿ ಮಾಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

Advertisement

ಮಾಧ್ಯಮಗಳಿಗೆ ಪ್ರತಿಕ್ರಿ ಯೆ ನೀಡಿ, ಈ ಬಜೆಟ್‌ನಲ್ಲಿ ನಿರ್ಮಲಾ ತಮ್ಮ ಸರ್ಕಾರ ಉಳಿಸಿಕೊಳ್ಳಲು ಬಿಹಾರ ಹಾಗೂ ಆಂಧ್ರ ಕ್ಕೆ ಒತ್ತು ನೀಡಿದ್ದಾರೆ. ಇದು ನಿರಾಶಾದಾಯಕ ಬಜೆಟ್‌. ಇಲ್ಲಿ ಕೇಂದ್ರ ಸರ್ಕಾರ ದೇಶವನ್ನು ಒಂದಾಗಿ ನೋಡಿಲ್ಲವೆಂದು ಟೀಕಿಸಿದರು.
ಇಡೀ ವಿಶ್ವ ಭಾರತವನ್ನು ಬೆಂಗಳೂರಿನ ಮೂಲಕ ನೋಡುತ್ತಿದೆ.

ಬೆಂಗಳೂರು ಹಾಗೂ ಕರ್ನಾಟಕ ಹೆಚ್ಚು ಉದ್ಯೋಗಗಳನ್ನು ಸೃಷ್ಟಿ ಮಾಡಿ ಜಾಗತಿಕ ಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ಹೀಗಾಗಿ ಬೆಂಗ ಳೂರಿಗೆ ಮೂಲಸೌಕರ್ಯ ನೆರವು, ಕರ್ನಾಟಕಕ್ಕೆ ಸಹಾಯ ಮಾಡುವ ಭರವಸೆ ಇತ್ತು. ನಿರ್ಮಲಾ ಅವರು ಕರ್ನಾಟಕವನ್ನು ಪ್ರತಿನಿಧಿಸಿದ್ದು, ತಮ್ಮ ರಾಜ್ಯಕ್ಕೆ ಆದ್ಯತೆ ನೀಡುತ್ತಾರೆ. ಕರ್ನಾಟಕದ ಹಿತ ರಕ್ಷಣೆ ಮಾಡುತ್ತಾರೆ, ಬಾಕಿ ಇರುವ ಯೋಜನೆಗಳಿಗೆ ಅನುದಾನ ನೀಡುತ್ತಾರೆ ಎಂಬ ನಿರೀಕ್ಷೆ ಹುಸಿ ಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ತೆರಿಗೆ ಹೊರೆ ರಹಿತ‌ ಬಜೆಟ್‌: ಅಶೋಕ

Advertisement

ಬೆಂಗಳೂರು: ರೈತ ಸ್ನೇಹಿ, ತೆರಿಗೆಹೊರೆರಹಿತ, ಸರ್ವಜನ ಕೇಂದ್ರಿತ ಹಾಗೂ ದೇಶದ ಭವಿಷ್ಯ ಬರೆಯುವ ಸುಭದ್ರ ಬಜೆಟ್‌ ಎಂದು ಪ್ರತಿಪಕ್ಷ ನಾಯಕ ಅಶೋಕ್‌ ಹೇಳಿದರು.

ಕಾಂಗ್ರೆಸ್‌ ಸರ್ಕಾರ ಯಾವಾಗಲೂ ಅನುದಾನ ತಾರತಮ್ಯದ ಬಗ್ಗೆ ಹೇಳುತ್ತದೆ. 50 ವರ್ಷಗಳ ಅವಧಿಗೆ ಬಡ್ಡಿರಹಿತ ಸಾಲ ನೀಡುವ ಪ್ರಧಾನಮಂತ್ರಿ ಗತಿಶಕ್ತಿ ಮಾಸ್ಟರ್‌ ಪ್ಲಾನ್‌ ಅನ್ನು ಕೇಂದ್ರ ಇನ್ನೂ ಒಂದು ವರ್ಷ ಮುಂದುವರಿಸಲಿದೆ. ಇದಕ್ಕಾಗಿ 1.5 ಲಕ್ಷ ಕೋಟಿ ರೂ. ಮೀಸಲಿಟ್ಟಿದ್ದು, ಖಾಲಿ ಖಜಾನೆಯ ರಾಜ್ಯ ಸರ್ಕಾರ ಇಂತಹ ಯೋಜನೆಗಳನ್ನು ಬಳಸಿಕೊಂಡಾದರೂ ಜನಕಲ್ಯಾಣಕ್ಕೆ ಶ್ರಮಿಸಲಿ ಎಂದಿದ್ದಾರೆ.

ಹೈದರಾಬಾದ್‌-ಬೆಂಗಳೂರು ಕೈಗಾರಿ ಕಾ ಕಾರಿಡಾರ್‌ನಿಂದ ಹೊಸ ಉದ್ಯೋಗ ಗಳು ಸೃಷ್ಟಿಯಾಗಿ ಜನರಿಗೆ ಸುಭದ್ರ ಬದುಕು ಸಿಗಲಿದೆ. 1 ಲಕ್ಷ ವಿದ್ಯಾರ್ಥಿಗಳಿಗೆ ಶೇ. 3ರ ಬಡ್ಡಿದರದಲ್ಲಿ ಸಾಲ, ಮುಂತಾದವು ಜನಕಲ್ಯಾಣಕ್ಕೆ ಹೊಸ ದಿಕ್ಕು ನೀಡಿದೆ ಎಂದರು.

ವಿಕಸಿತ ಭಾರತಕ್ಕಾಗಿ ಅಡಿಪಾಯ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗೆ 1.48 ಲಕ್ಷ ಕೋಟಿ ರೂ. ಮೀಸಲಿಡುವುದಾಗಿ ಘೋಷಿಸುವ ಮೂಲಕ ಪ್ರಧಾನಿ ಮೋದಿ ಸಂಕಲ್ಪದ ವಿಕಸಿತ ಭಾರತದ ನಿರ್ಮಾಣಕ್ಕೆ ಉತ್ತಮ ಅಡಿಪಾಯ ದೊರೆ ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ದೇಶದ ಅರ್ಥಿಕತೆಗೆ ಶರವೇಗ ನೀಡುವ ನಿಟ್ಟಿನಲ್ಲಿ ಘೋಷಿಸಿರುವ ಕಾರ್ಯಕ್ರಮ ಗಳು ಹಣದುಬ್ಬರ ನಿಯಂತ್ರಿಸಲಿದ್ದು, ಬಡತನ ನಿರ್ಮೂಲನೆ, ಗ್ರಾಮೀಣಾಭಿವೃದ್ಧಿ ಗೆ 2.66 ಲಕ್ಷ ಕೋಟಿ ರೂ. ಮೀಸಲಿರಿಸಿ, ಕೃಷಿಗೆ 1.52 ಲಕ್ಷ ಕೋಟಿ ಅನುದಾನ ನೀಡುವ ಮೂಲಕ ರೈತರ ಏಳಿಗೆಗೆ, ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಿರುವುದು ಸ್ವಾಗತಾರ್ಹಎಂದಿದ್ದಾರೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ, ಪ್ರವಾಸೋದ್ಯಮ ಸೇರಿ ವಿವಿಧ ಉದ್ಯಮಗಳ ಬೆಳವಣಿಗೆಗೆ ವಿಶೇಷ ಒತ್ತು ನೀಡಿರುವುದು ಪ್ರಶಂಸನೀಯ ಎಂದು ಶ್ಲಾ ಸಿದ್ದಾರೆ.

ವಿಕಸಿತ ಭಾರತಕ್ಕಾಗಿ ದಿಟ್ಟ ಹೆಜ್ಜೆ: ಕೇಂದ್ರ ಸಚಿವ  ಜೋಶಿ

ಹುಬ್ಬಳ್ಳಿ: ಈ ಬಜೆಟ್‌ ವಿಕಸಿತ ಭಾರತದ ಗುರಿಯನ್ನು ಮತ್ತಷ್ಟು ಗಟ್ಟಿಗೊಳಿಸುವತ್ತ ಇರಿಸಿದ ದಿಟ್ಟ ಹೆಜ್ಜೆ ಮತ್ತು ದೂರಗಾಮಿ ಚಿಂತನೆ ಯದ್ದಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹರ್ಷ ವ್ಯಕ್ತಪಡಿಸಿದ್ದಾರೆ.

ಬಂಡವಾಳ ವೆಚ್ಚವನ್ನು 11 ಲಕ್ಷ ಕೋಟಿ ರೂ. ಗಳಿಗೆ ಹೆಚ್ಚಿಸಿದ್ದು, ಅದರ ಬಹುಭಾಗ ವನ್ನು ಮೂಲಭೂತ ಸೌಲರ್ಯಗಳ ನಿರ್ಮಾಣಕ್ಕೆ ವ್ಯಯಿಸುವ ಉದ್ದೇಶ ಹೊಂದಲಾಗಿದೆ. ಪ್ರಧಾನಿ ಮೋದಿಯವರ ವಿಕಸಿತ ಭಾರತ ಪರಿಕಲ್ಪನೆಯನ್ನು ಸಕಾರ ಗೊಳಿಸುವತ್ತ ಮುಂಗಡ ಪತ್ರ ನಿಗಾವಹಿಸಿ ರುವುದು ಸ್ಪಷ್ಟವಾಗಿದೆ. ವಿತ್ತೀಯ ಕೊರತೆ ಯನ್ನು ಶೇ.5.1ಕ್ಕೆ ನಿಗದಿಗೊಳಿಸುವ ಮೂಲಕ ವಿತ್ತೀಯ ಶಿಸ್ತು ಪಾಲಿಸಲಾಗಿದೆ.

ವಿಶಾಖ ಪಟ್ಟಣಂ-ಚೆನ್ನೈ ಕೈಗಾರಿಕಾ ಕಾರಿಡಾರ್‌, ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿರ್ಮಾಣದ ಮೂಲಕ ರೈಲ್ವೆ ಯೋಜನೆಗಳಿಗೆ ವಿಶೇಷ ಸ್ಥಾನಮಾನ ನೀಡಲಾಗಿದೆ ಎಂದು ಜೋಶಿ ಬಣ್ಣಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next