Advertisement

ಮಂಡ್ಯ ಮೆಗಾ ಡೇರಿ ಉದ್ಘಾಟಿಸಿದ ಕೇಂದ್ರ ಸಚಿವ ಅಮಿತ್ ಶಾ

12:38 PM Dec 30, 2022 | Team Udayavani |

ಮಂಡ್ಯ: ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಶುಕ್ರವಾರ ಬೆಳಗ್ಗೆ ಜಿಲ್ಲೆಗೆ ಆಗಮಿಸಿದರು.

Advertisement

ಬೆಂಗಳೂರಿನ ಎಚ್ ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದ ಹೆಲಿಪ್ಯಾಡ್ ಗೆ ಬೆಳಿಗ್ಗೆ 11.15ಕ್ಕೆ ಆಗಮಿಸಿದರು. ನಂತರ ನೇರವಾಗಿ ಕಾರಿನ ಮೂಲಕ ಗೆಜ್ಜಲಗೆರೆ ಗ್ರಾಮದ ಮಂಡ್ಯ ಜಿಲ್ಲಾ ಹಾಲು ಒಕ್ಕೂಟಕ್ಕೆ ಆಗಮಿಸಿ ಮೆಗಾ ಡೇರಿಯನ್ನು ಉದ್ಘಾಟಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ‌ ಪ್ರಧಾನಿ ಎಚ್.ಡಿ.ದೇವೇಗೌಡ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಮನ್ ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರು, ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್ ಸೇರಿದಂತೆ ಮತ್ತಿತರರಿದ್ದರು.

ಇದನ್ನೂ ಓದಿ:ರಿಷಭ್ ಪಂತ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ

ಇದಕ್ಕೂ ಮುನ್ನ ಹೆಲಿಪ್ಯಾಡ್ ಗೆ ಭೇಟಿ ನೀಡಿದ ಎಸ್ ಬಿಜಿ ಭದ್ರತಾ ತಂಡ ಹುಲಿಗೆರೆ ಪುರ ಹಾಗೂ ಮಂಡ್ಯದ ಪಿಇಎಸ್ ಕ್ರೀಡಾಂಗಣದ ಹೆಲಿಪ್ಯಾಡ್ ಅನ್ನು ಪರಿಶೀಲನೆ ನಡೆಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next