Advertisement
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಗ್ಯಾರಂಟಿಗಳ ಹೆಸರಲ್ಲಿ ಜನರನ್ನು ಮೂರ್ಖರನ್ನು ಮಾಡಲು ಹೊರಟಿದೆ. ಇಡೀ ದೇಶದಲ್ಲಿ ಸೋತು ಸುಣ್ಣವಾಗಿರುವ ಕಾಂಗ್ರೆಸ್ ರಾಜ್ಯದಲ್ಲಿ ಏನೇನೋ ಸುಳ್ಳುಗಳನ್ನು ಹೇಳಿ ಅಧಿಕಾರಕ್ಕೆ ಬಂದಿದ್ದು, ಕಾಂಗ್ರೆಸ್ ಪಕ್ಷದ ಪಾಲಿಗೆ ಕರ್ನಾಟಕ ಸರ್ಕಾರ ಎಟಿಎಂ ಆಗಿದೆ ಎಂದು ಆರೋಪಿಸಿದರು.
Related Articles
Advertisement
ರಾಜ್ಯ ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆಯಲ್ಲಿ ಯಾವುದೇ ಗೊಂದಲ ಭಿನ್ನಾಭಿಪ್ರಾಯ ಇಲ್ಲವೇ ಇಲ್ಲ. ಜುಲೈ 3 ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದ್ದು ಅದಕ್ಕೂ ಮುನ್ನ ವಿಪಕ್ಷ ನಾಯಕನ ಆಯ್ಕೆ ನಡಿಯಲಿದೆ ಎಂದರು.
ಕರ್ನಾಟಕ ಸೇರಿದಂತೆ ದೇಶದಲ್ಲಿ ಎಲ್ಲಿಯೂ ರಸಗೊಬ್ಬರದ ಕೊರತೆ ಇಲ್ಲ ವಿಶೇಷವಾಗಿ ನ್ಯಾನೋ ಯೂರಿಯಾ ಮಹತ್ವದ ಸಹಕಾರಿ ಆಗುತ್ತಿದೆ ರಸ ಗೊಬ್ಬರ ಉತ್ಪಾದನೆಯಲ್ಲಿ ಆತ್ಮನಿರ್ಭರತೆ ನಿಟ್ಟಿನಲ್ಲಿ ಬಂದ್ ಆಗಿದ್ದ 6 ರಸಗೊಬ್ಬರ ಕಾರ್ಖಾನೆಗಳನ್ನು ನಮ್ಮ ಸರ್ಕಾರ ಪುನರಾರಂಭ ಮಾಡಿದೆ. ಉತ್ತರ ಕರ್ನಾಟಕದಲ್ಲಿ ರಸಗೊಬ್ಬರ ಕಾರ್ಖಾನೆ ಆರಂಭ ಸುಲಭ ಸಾಧ್ಯವಿಲ್ಲವಾಗಿದ್ದು ಅದಕ್ಕೆ ಬಂದರು ಹತ್ತಿರದಲ್ಲಿ ಇರಬೇಕಾಗಿರುತ್ತದೆ, ಇನ್ನಿತರ ಸೌಲಭ್ಯಗಳು ಬೇಕಾಗುತ್ತದೆ ಎಂದು ಸಚಿವರು ತಿಳಿಸಿದರು.
ಯೂರಿಯಾ ಉತ್ಪಾದನೆಯಲ್ಲಿ ದೇಶ ಆತ್ಮನಿರ್ಭರತೆ ಸಾಧಿಸಿದ್ದು ಡಿಎಪಿ ಹಾಗೂ ಪೊಟ್ಯಾಷ್ ರಸಗೊಬ್ಬರವನ್ನು ಆಮದು ಮಾಡಿಕೊಳ್ಳುವುದು ಅನಿವಾರ್ಯವಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.
ಕೇಂದ್ರ ಸರ್ಕಾರದ ಉದ್ಯೋಗ ಮೇಳ ಕುರಿತಾಗಿ ಪ್ರತಿಕ್ರಿಯಿಸಿದವರು ಈ ದಿನ ದೇಶಾದ್ಯಂತ 43 ಕಡೆಗಳಲ್ಲಿ ಸುಮಾರು 70 ಸಾವಿರಕ್ಕೂ ಹೆಚ್ಚು ಯುವಕ ಯುವತಿಯರಿಗೆ ನೇಮಕಾತಿ ಪತ್ರ ನೀಡಿಕೆ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ ಎಂದರು.
ಬ್ಯಾಂಕ್ ಇನ್ನಿತರ ಕೇಂದ್ರ ಸರ್ಕಾರ ಇಲಾಖೆಗಳಲ್ಲಿ ಅರ್ಹತೆ ಆಧಾರದ ಮೇಲೆ ಉದ್ಯೋಗ ದೊರೆಯುತ್ತಿದೆ ಬ್ಯಾಂಕಿಂಗ್ ವಲಯದಲ್ಲಿ ಕರ್ನಾಟಕದವರಿಗೆ ಹೆಚ್ಚಿನ ಅವಕಾಶ ಸಿಗುತ್ತಿಲ್ಲ ಎಂಬುದು ಸರಿಯಲ್ಲ ನಮ್ಮ ರಾಜ್ಯದ ಯುವಕ ಯುವತಿಯರು ಬ್ಯಾಂಕಿಂಗ್ ಪರೀಕ್ಷೆಗೆ ತಯಾರಿಯಾಗಿ ಉತ್ತಮ ಸಾಧನೆ ತೋರಲಿ ಎಂದರು.