Advertisement

ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್

05:53 PM Jan 05, 2021 | Team Udayavani |

ಬೆಂಗಳೂರು : ದೇಹದಲ್ಲಿ ಶುಗರ್ ಲೆವೆಲ್ ಕಡಿಮೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಮಂಗಳವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Advertisement

ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಸಚಿವರಾಗಿರುವ ಡಿ .ವಿ. ಸದಾನಂದಗೌಡ ಶಿವಮೊಗ್ಗದಲ್ಲಿ ನಡೆದ ಕಾರ್ಯಕರಣಿ ಸಭೆಯಲ್ಲಿ ಪಾಲ್ಗೊಂಡು ಬೆಂಗಳೂರಿಗೆ ಬರುತ್ತಿದ್ದಾಗ, ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ತಕ್ಷಣವೇ ಅವರನ್ನು ಚಿತ್ರದುರ್ಗದ ಬಸವೇಶ್ವರ  ಆಸ್ಪತ್ರೆಯಲ್ಲಿ ದಾಖಲಿಸಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಟರ್ ಆಸ್ಪತ್ರೆಗೆ ಕರೆ ತರಲಾಗಿತ್ತು. ಲೋ ಶುಗರ್ ಆಗಿರುವ ಕಾರಣದಿಂದ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು, ಎರಡು ದಿನದ ಚಿಕಿತ್ಸೆಯ ಬಳಿಕ ಮಂಗಳವಾರ ಬೆಂಗಳೂರಿನ ಆಸ್ಟರ್ ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಇದನ್ನೂ ಓದಿ : ಭಾರತದಲ್ಲಿ ಸಂಚಲನ ಸೃಷ್ಟಿಸಲು ಬರುತ್ತಿದೆ Renault Kiger: ಬಿಡುಗಡೆ ದಿನಾಂಕ ಪ್ರಕಟ

Advertisement

Udayavani is now on Telegram. Click here to join our channel and stay updated with the latest news.

Next