ಬೆಂಗಳೂರು : ಜಾತಿ ನಿಂದನೆ ಪ್ರಕರಣದಲ್ಲಿ ಶೇ.೩ರಷ್ಟು ಮಾತ್ರ ಶಿಕ್ಷೆಯಾಗಿದೆ, ಮ್ಯಾನ್ಯುವಲ್ ಸ್ಕ್ಯಾವೆಂಜ್ ನಲ್ಲಿ
90 ಜನರು ಮೃತಪಟ್ಟಿದ್ದಾರೆ ಈ ಬಗ್ಗೆ ಎಷ್ಟು ಜನರಿಗೆ ಆರೋಪಪಟ್ಟಿ ಸಲ್ಲಿಸಿದ್ದೀರಿ ? ಎಂದು ಕೇಂದ್ರ ಸಮಾಜ ಕಲ್ಯಾಣ ಸಚಿವ ಎ.ನಾರಾಯಣಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಈ ವಿಚಾರ ತಿಳಿಸಿದ ಅವರು, ೧೯೯೫ ರಿಂದ ೨೦೨೨ರ ಅವಧಿಯಲ್ಲಿ ೯೦ ಜನರು ಮೃತಪಟ್ಟಿದ್ದಾರೆ. ಈ ಸಂಬಂಧ ಏನು ಕ್ರಮ ತೆಗೆದುಕೊಂಡಿದ್ದಾರೆ ಗುತ್ತಿಗೆದಾರರ ವಿರುದ್ಧ ಎಷ್ಟು ಪ್ರಕರಣ ದಾಖಲಾಗಿದೆ ಎಂದು ಪ್ರಶ್ನೆ ಕೇಳಲಾಗಿದೆ. ಆದಷ್ಟು ಬೇಗ ವಿವರಣೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದರು.
ರಾಜ್ಯದಲ್ಲಿ ಎಷ್ಟು ಮರ್ಯಾದೆ ಹತ್ಯಾ ಪ್ರಕರಣ ನಡೆದಿದೆ ಎಂಬ ಬಗ್ಗೆ ಮಾಹಿತಿ ಕೇಳಿದ್ದೇನೆ. ಆರೋಪಪಟ್ಟಿ ಸಲ್ಲಿಸದೇ ಇರುವುದು ಪೊಲೀಸ್ ವೈಫಲ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಾತಿ ನಿಂದನೆ ಪ್ರಕರಣದಲ್ಲಿ ಶಿಕ್ಷೆ ಪ್ರಮಾಣ ಶೇ. ೩ರಷ್ಟು ಮಾತ್ರ ಇದೆ. ೬೦೦೦ ಪ್ರಕರಣಗಳಲ್ಲಿ ಆರೋಪಪಟ್ಟಿ ಸಲ್ಲಿಸಬೇಕಾಗಿದೆ. ಈ ಬಗ್ಗೆ ತುರ್ತು ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.
ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವುದಕ್ಕೆ ಮಾಸ್ಟರ್ ಪ್ಲಾನ್ ರೂಪಿಸುವಂತೆ ರಾಜ್ಯ ಸರಕಾರಕ್ಕೆ ಸೂಚನೆ ನೀಡಲಾಗಿದೆ. ಗ್ರಾಮೀಣಾಭಿವೃದ್ಧಿ, ನರೇಗಾ, ತೋಟಗಾರಿಕೆ, ರೇಷ್ಮೆ, ಕೃಷಿ ಇಲಾಖೆ ಸೇರಿ ಮಾಸ್ಟರ್ ಪ್ಲ್ಯಾನ್ ರೂಪಿಸುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದರು.