Advertisement

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

05:23 PM Mar 29, 2024 | Team Udayavani |

ಹೊಸದಿಲ್ಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಅವರನ್ನು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಶುಕ್ರವಾರ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿಗೆ ಹೋಲಿಸಿದ್ದಾರೆ. ಸುನೀತಾ ಅವರು ಬಹುಶಃ ತಮ್ಮ ಪತಿಯ ಹುದ್ದೆಯನ್ನು ಅಲಂಕರಿಸಲು ತಯಾರಿ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

Advertisement

“ನೀವು ಹೆಸರಿಸುತ್ತಿರುವ ಮೇಡಂ(ಸುನೀತಾ) ಬಹುಶಃ ಬಿಹಾರದಲ್ಲಿ ರಾಬ್ರಿ ದೇವಿ ಮಾಡಿದಂತೆ ಹುದ್ದೆಯನ್ನು ಅಲಂಕರಿಸಲು ತಯಾರಿ ನಡೆಸುತ್ತಿದ್ದಾರೆ” ಎಂದು ಬಿಜೆಪಿಯ ಹಿರಿಯ ನಾಯಕ ದೆಹಲಿ ಬಿಜೆಪಿಯ ಚುನಾವಣಾ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಹೇಳಿಕೆ ನೀಡಿದ್ದಾರೆ.

ಸುನೀತಾ ಕೇಜ್ರಿವಾಲ್ ಅವರು ವಾಟ್ಸಾಪ್ ಅಭಿಯಾನವನ್ನು ಪ್ರಾರಂಭಿಸಿದ್ದು, ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಇಡಿ ಬಂಧನದಲ್ಲಿರುವ ತನ್ನ ಪತಿಯನ್ನು ಬೆಂಬಲಿಸುವಂತೆ ಜನರನ್ನು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next