Advertisement

ಕೇಂದ್ರ ಸಚಿವ ಹೆಗಡೆ, ಸಿ.ಟಿ. ರವಿಗೆ ನೋಟಿಸ್‌

06:35 AM Mar 09, 2018 | Team Udayavani |

ಬೆಂಗಳೂರು: ಟಿಪ್ಪು ಸುಲ್ತಾನ್‌ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ವಿಚಾರದ ಸಲುವಾಗಿ ದಾಖಲಾಗಿರುವ ಕ್ರಿಮಿನಲ್‌ ಅರ್ಜಿ ಸಂಬಂಧ ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ಹಾಗೂ ಶಾಸಕ ಸಿ.ಟಿ ರವಿ ಅವರಿಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

Advertisement

ಜನಪ್ರತಿನಿಧಿಗಳಾಗಿ ಕೋಮು ಸಂಘರ್ಷಕ್ಕೆ ಎಡೆ ಮಾಡಿಕೊಡುವ ಹೇಳಿಕೆ ನೀಡಿದ್ದ ಸಚಿವ ಅನಂತಕುಮಾರ್‌ ಹೆಗಡೆ ಹಾಗೂ ಶಾಸಕ ಸಿ.ಟಿ ರವಿ ವಿರುದ್ಧ ಸಲ್ಲಿಸಿದ್ದ ಖಾಸಗಿ ದೂರು ವಜಾಗೊಳಿಸಿದ್ದ ಅಧೀನ ನ್ಯಾಯಾಲಯದ ಆದೇಶ ಪ್ರಶ್ನಿಸಿ ಎ. ಆಲಂ ಪಾಷಾ ಎಂಬುವವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಗುರುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್‌.ಬಿ ಬೂದಿಹಾಳ್‌ ಅವರಿದ್ದ ಏಕಸದಸ್ಯ ಪೀಠ, ಪ್ರತಿವಾದಿಗಳಾದ ಸಚಿವ ಅನಂತಕುಮಾರ್‌ ಹೆಗಡೆ ಹಾಗೂ ಶಾಸಕ ಸಿ.ಟಿ ರವಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿತು. ಅರ್ಜಿದಾರರ ಪರ ವಕೀಲ ಮೂರ್ತಿ ಡಿ. ನಾಯಕ್‌  ವಾದ ಮಂಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next