ಬೆಂಗಳೂರು: ಕೃಷಿ ಯೋಜನೆಗಳ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರ ಅಳವಡಿಸಿಕೊಂಡ ಡಿಜಿಟಲ್ ತಂತ್ರಜ್ಞಾನ ಇಡೀ ದೇಶಕ್ಕೆ ಮಾದರಿಯಾಗಿದ್ದು, ಇದೇ ಮಾದರಿ ಅನುಸರಿಸಲು ವಿವಿಧ ರಾಜ್ಯಗಳಿಗೂ ಸಲಹೆ ನೀಡಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದರು.
ವಿಧಾನಸೌಧದ ಬ್ಯಾಾಂಕ್ವೆಟ್ ಹಾಲ್‌ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ’ ಲೋಕಾರ್ಪಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮುಂದಿನ ಎರಡು ದಿನಗಳ ಕಾಲ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಕೃಷಿ ಸಚಿವರುಗಳೊಂದಿಗೆ ಕೃಷಿ ಸಂಬಂಧಿತ ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ಈ ಸಂದರ್ಭದಲ್ಲಿ ಕರ್ನಾಟಕ ಅಳವಡಿಸಿಕೊಂಡ ಡಿಜಿಟಲ್ ಮಾದರಿಯನ್ನು ಅನುಸರಿಸಲು ಸಲಹೆ ನೀಡಲಾಗುವುದು ಎಂದು ಹೇಳಿದರು.
ಇದಕ್ಕೆ ಪೂರಕವಾಗಿ ಕೇಂದ್ರ ಸರ್ಕಾರ ಕೂಡ ಡಿಜಿಟಲ್ ಕೃಷಿ ಮಿಷನ್‌ನಡಿ ಎಲ್ಲ ಕೃಷಿ ಮತ್ತು ರೈತ ಪರ ಯೋಜನೆಗಳನ್ನು ಒಂದೇ ವೇದಿಕೆ ಅಡಿ ತಂದು, ಪಾರದರ್ಶಕವಾಗಿ ಹಾಗೂ ನಿಜವಾದ ಫಲಾನುಭವಿಗಳಿಗೆ ತಲುಪಿಸಲು ಉದ್ದೇಶಿಸಿದೆ. ಇದಕ್ಕೂ ರಾಜ್ಯದ ಕ್ರಮ ಪ್ರೇರಣೆಯಾಗಿದೆ ಎಂದು ಶ್ಲಾಘಿಸಿದರು.
ಇದನ್ನೂ ಓದಿ:ಕಡಿಮೆ ಅಪಾಯದ ಭೂಕಂಪ, ನಿರ್ಭಯವಾಗಿರಿ: ವಿಜಯಪುರ ಜಿಲ್ಲಾಡಳಿತದ ಅಭಯ
ಇದಕ್ಕೂ ಮುನ್ನ ಮಾತನಾಡಿದ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯದಲ್ಲಿ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳು ಪ್ರತ್ಯೇಕವಾಗಿ ಕೆಲಸ ಮಾಡುತ್ತಿವೆ. ಇವುಗಳು ಒಟ್ಟಾಗಿ ಒಂದೇ ವೇದಿಕೆಯಲ್ಲಿ ಕಾರ್ಯ ನಿರ್ವಹಿಸುವಂತಾಗಬೇಕು. ಇದರಿಂದ ಯೋಜನೆಗಳನ್ನು ರೂಪಿಸಲು ಅನುಕೂಲ ಆಗುತ್ತದೆ. ಜತೆಗೆ ಕೃಷಿ ಉತ್ಪನ್ನಗಳ ರಫ್ತಿಗೆ ಕೈಗಾರಿಕೆ ಇಲಾಖೆಯಲ್ಲಿ ಪ್ರತ್ಯೇಕ ಘಟಕ ನಿರ್ಮಿಸಬೇಕು. ಅಲ್ಲಿ ಕೃಷಿ ಮತ್ತು ತೋಟಗಾರಿಕೆ ಅಧಿಕಾರಿಯನ್ನು ನೇಮಿಸಲಾಗುವುದು. ಇದರಿಂದ ರೈತರಿಗೆ ಸಾಕಷ್ಟು ಅನುಕೂಲ ಆಗಲಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಾಯಿ ಯೋಜನೆಗೆ ಚಾಲನೆ ನೀಡಿ, ಸಾಂಕೇತಿಕವಾಗಿ ನಾಲ್ವರು ವಿದ್ಯಾಾರ್ಥಿಗಳಿಗೆ ಶಿಷ್ಯವೇತನದ ಚೆಕ್ ವಿತರಿಸಲಾಯಿತು.