ಮಹಾರಾಷ್ಟ್ರ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮಹಾರಾಷ್ಟ್ರದ ಯವತ್ಮಾಲ್‌ನಲ್ಲಿ ಚುನಾವಣಾ ಪ್ರಚಾರ ನಡೆಸಿ ಭಾಷಣ ಮಾಡುವ ವೇಳೆ ವೇದಿಕೆಯ ಮೇಲೆ ಹಠಾತ್ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾರೆ.
ಬುಧವಾರ ರ‍್ಯಾಲಿಯಲ್ಲಿ ಭಾಗಿಯಾಗಿ ಬಳಿಕ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಲು ಗಡ್ಕರಿ ಯವತ್ಮಾಲ್‌ನ ಪುಸಾದ್‌ಗೆ ಬಂದಿದ್ದರು. ಈ ವೇಳೆ ವೇದಿಕೆಯಲ್ಲಿ ಮಾತನಾಡುತ್ತಿದ್ದಾಗ ಏಕಾಏಕಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಕೂಡಲೇ ಪಕ್ಷದ ಹಿರಿಯ ನಾಯಕರು ಸೇರಿ ಚಿಕಿತ್ಸೆಗೆ ಕರೆದೊಯ್ದಿದ್ದಾರೆ.
ಮೊದಲ ಹಂತದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿರುವ ನಾಗ್ಪುರದ ಬಿಜೆಪಿ ಅಭ್ಯರ್ಥಿ ಗಡ್ಕರಿ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ನಾಯಕ ರಾಜಶ್ರೀ ಪಾಟೀಲ್ ಅವರ ಪರ ಪ್ರಚಾರ ನಡೆಸುತ್ತಿದ್ದರು, ಅವರು ಯವತ್ಮಾಲ್-ವಾಶಿಮ್ ಲೋಕಸಭಾ ಕ್ಷೇತ್ರದಿಂದ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಅಭ್ಯರ್ಥಿಯಾಗಿದ್ದಾರೆ.
ಮಹಾರಾಷ್ಟ್ರದ ಬುಲ್ಧಾನ, ಅಕೋಲಾ, ಅಮರಾವತಿ, ವಾರ್ಧಾ, ಹಿಂಗೋಲಿ, ನಾಂದೇಡ್ ಮತ್ತು ಪರ್ಭಾನಿ ಜೊತೆಗೆ ಯವತ್ಮಾಲ್, ಏಪ್ರಿಲ್ 26 (ಶುಕ್ರವಾರ) ಎರಡನೇ ಹಂತದ ಮತದಾನ ನಡೆಯಲಿದೆ.
ಇದನ್ನೂ ಓದಿ: ಹೊಸ ಚಿತ್ರಕ್ಕೆ ಮಹೇಶ್ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ