Advertisement

ಸೆ.7ರಂದು ಬೆಂಗಳೂರಿಗೆ ಆಗಮಿಸಲಿರುವ ಕೇಂದ್ರ ಸಚಿವ ನಿತಿನ್‌ ಗಡ್ಕರಿ

07:22 PM Sep 05, 2022 | Team Udayavani |

ಬೆಂಗಳೂರು: ಸೆಪ್ಟೆಂಬರ್‌ 8 ಮತ್ತು 9 ರಂದು ಬೆಂಗಳೂರಿನಲ್ಲಿ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಇಲಾಖೆಯಿಂದ ಅಖಿಲ ಭಾರತ ಮಟ್ಟದ ಸಮ್ಮೇಳನ ನಡೆಯಲಿದೆ.

Advertisement

ದೇಶದ ಎಲ್ಲಾ ರಾಜ್ಯಗಳ ಸಾರಿಗೆ, ಕೈಗಾರಿಕೆ ಮತ್ತು ಲೋಕೋಪಯೋಗಿ ಇಲಾಖೆಗಳ ಸಚಿವರು ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದು, ಸಮ್ಮೇಳನದಲ್ಲಿ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ಸಚಿವ ನಿತಿನ್‌ ಗಡ್ಕರಿ ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಸೆ.7 ರಂದು ಸಂಜೆ ನಿತಿನ್‌ ಗಡ್ಕರಿ ಬೆಂಗಳೂರಿಗೆ ಆಗಮಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next