Advertisement

ಕೃಷ್ಣಾ ಮೇಲ್ದಂಡೆ ಯೋಜನೆಗಾಗಿ ಕೇಂದ್ರ ಸಚಿವರ ಭೇಟಿ: ಸಿಎಂ

10:56 PM Mar 09, 2020 | Team Udayavani |

ವಿಧಾನ ಪರಿಷತ್‌: ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಸಂಬಂಧಪಟ್ಟ ಸಚಿವರೊಂದಿಗೆ ಹಾಗೂ ಅಧಿಕಾರಿಗಳ ಜತೆ ಖುದ್ದು ಮಾತುಕತೆ ನಡೆಸಲಿದ್ದೇನೆಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದರು.

Advertisement

ಸದನದಲ್ಲಿ ಉತ್ತರ ನೀಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಐದು ವರ್ಷ, ಕುಮಾರಸ್ವಾಮಿ ನೇತೃತ್ವದಲ್ಲಿ ಒಂದೂವರೆ ವರ್ಷ ರಾಜ್ಯದಲ್ಲಿ ಅಧಿಕಾರ ನಡೆಸಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಕಾಮಗಾರಿಗೆ ಅನುದಾನ ಮೀಸಲಿರಿಸಿರಲಿಲ್ಲ.

ಆದರೆ, ಇದೀಗ ಅನುದಾನ ನೀಡುವಂತೆ ಸಲಹೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಯೋಜನೆ ಅಭಿವೃದ್ಧಿಗೆ ಸಲಹೆಗಳನ್ನು ನೀಡಲಾಗುತ್ತಿದೆ. ಹೀಗಾದಲ್ಲಿ ಯೋಜನೆ ಜಾರಿ ಮಾಡುವುದಾದರೂ ಹೇಗೆ ಎಂಬ ಯಕ್ಷ ಪ್ರಶ್ನೆ ನನ್ನನ್ನು ಕಾಡುತ್ತಿದೆ. ನಮ್ಮ ಆರ್ಥಿಕ ಪರಿಸ್ಥಿತಿಯ ಇತಿಮಿತಿಯೊಳಗೆ ಕಾರ್ಯಾನುಷ್ಠಾನ ಮಾಡಲಿದ್ದೇವೆ ಎಂದರು.

ಕೃಷ್ಣಾ ಮೇಲ್ದಂಡೆಯ 3ನೇ ಹಂತದ ಕಾಮಗಾರಿಗೆ ಪ್ರಸಕ್ತ ಬಜೆಟ್‌ನಲ್ಲಿ ಹಣ ಮೀಸಲಿಟ್ಟಿರಲಿಲ್ಲ. ಆದರೂ, ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ 10 ಸಾವಿರ ಕೋಟಿ ರೂ.ಮೀಸಲಿಡಲಾಗಿದೆ. ಅಲ್ಲದೆ, ಹಂತ ಹಂತವಾಗಿ ಯೋಜನೆ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next