ಮಣಿಪುರ: ಮಣಿಪುರ ರಾಜಧಾನಿ ಇಂಫಾಲದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಏತನ್ಮಧ್ಯೆ ಕೇಂದ್ರ ಸಚಿವ ರಾಜ್ ಕುಮಾರ್ ರಂಜನ್ ಸಿಂಗ್ ಅವರ ನಿವಾಸಕ್ಕೆ ಅಪರಿಚಿತ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಶುಕ್ರವಾರ ನಸುಕಿನ ಜಾವ ನಡೆದಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ:Davangere; ಗುತ್ತಿಗೆದಾರರಿಂದ ಲಂಚ; ನಗರಸಭೆ ಸದಸ್ಯೆ, ಪತಿ ಮತ್ತು ಪುತ್ರ ಲೋಕಾಯುಕ್ತ ಬಲೆಗೆ
ಘಟನೆ ನಡೆದ ಸಂದರ್ಭದಲ್ಲಿ ಸಚಿವ ಆರ್ ಕೆ ರಂಜನ್ ಸಿಂಗ್ ಅವರು ನಿವಾಸದಲ್ಲಿ ಇರಲಿಲ್ಲವಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೂ ಮೊದಲು ಬಿಜೆಪಿ ಮುಖಂಡ, ರಾಜ್ಯ ಸಚಿವ ನೆಮ್ಚಾ ಕಿಪ್ ಗೆನ್ ಅವರ ನಿವಾಸಕ್ಕೂ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿತ್ತು.
ಹಿಂಸಾಚಾರದಲ್ಲಿ ಶಾಮೀಲಾಗಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಣಿಪುರ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಭರವಸೆ ನೀಡಿದ್ದಾರೆ.
ಬುಧವಾರ ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದು, ಹತ್ತು ಮಂದಿ ಗಾಯಗೊಂಡಿದ್ದರು. ಮಣಿಪುರದಲ್ಲಿ ಕಳೆದ ತಿಂಗಳಿನಿಂದ ಎರಡು ಸಮುದಾಯಗಳ ನಡುವೆ ಹೊತ್ತಿಕೊಂಡಿದ್ದ ಘರ್ಷಣೆ ತೀವ್ರ ಹಿಂಸಾಚಾರಕ್ಕೆ ತಿರುಗಿತ್ತು.