ಹೊಸದಿಲ್ಲಿ : ಇತ್ತೀಚೆಗೆ ದೆಹಲಿ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ (74) ಅವರು ಗುರುವಾರ ರಾತ್ರಿ ನಿಧನ ಹೊಂದಿದ್ದಾರೆ.
ಇದನ್ನೂ ಓದಿ: ಲಾಲು, ನಿತೀಶ್ ವಿದ್ಯಾರ್ಥಿಗಳಾಗಿರುವಾಗ ಪಾಸ್ವಾನ್ ವಿಧಾನಸಭಾ ಸದಸ್ಯ!
ಲೋಕ ಜನಶಕ್ತಿ ಪಾರ್ಟಿಯ ಸಂಸ್ಥಾಪಕರಾದ ರಾಮ್ ವಿಲಾಸ್ ಪಾಸ್ವಾನ್, 8 ಬಾರಿ ಸಂಸದರಾಗಿದ್ದರು. ಎನ್ ಡಿಎ ಮೈತ್ರಿಕೂಟದಲ್ಲಿದ್ದ ಎಲ್ ಜೆಪಿ ಪಕ್ಷದಿಂದ ಪಾಸ್ವಾನ್ ಅವರು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಇಂದು ತಮ್ಮ ತಂದೆ ನಿಧರಾಗಿದ್ದನ್ನು ಪುತ್ರ ಚಿರಾಗ್ ಅವರು ಟ್ವೀಟ್ ಮಾಡಿ ತಿಳಿಸಿದ್ದಾರೆ. ಬಾಲ್ಯದ ಫೋಟೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ.