ಕಾಪು : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸೋಮವಾರ ಮೂಳೂರು ತೊಟ್ಟಂ ನ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಕಡಲ್ಕೊರೆತ ತಡೆಯುವಲ್ಲಿ ಅಧಿಕಾರಿಗಳ ವಿಫಲತೆ, ಕಾಮಗಾರಿ ವಿಳಂಭದ ಬಗ್ಗೆ ಸ್ಥಳೀಯರು ಸಚಿವರ ಗಮನಕ್ಕೆ ತಂದಿದ್ದು ಈ ಬಗ್ಗೆ ಅಧಿಕಾರಿಗಳು ಮತ್ತು ಗುತ್ತಿಗೆದಾರರನ್ನು ತೀವ್ರ ತರಾಟೆಗೆ ತೆಗೆದು ಕೊಂಡ ಅವರು ಸಾರ್ವಜನಿಕ ಆಸ್ತಿ ಪಾಸ್ತಿ ರಕ್ಷಣೆ ಸರಕಾರ ಮತ್ತು ಜಿಲ್ಲಾಡಳಿತದ ಕರ್ತವ್ಯವಾಗಿದೆ. ಖಾಸಗಿ ಆಸ್ತಿ ಪಾಸ್ತಿ ರಕ್ಷಣೆಗಿಂದ ಸಾರ್ವಜನಿಕ ಆಸ್ತಿಪಾಸ್ತಿಗಳ ರಕ್ಷಣೆಗೆ ಒತ್ತು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಧಿಕಾರಿಗಳು ಖಾಸಗಿಯವರ ಜೊತೆ ಕೈಜೋಡಿಸಿದಲ್ಲಿ ಅವರ ವಿರುದ್ಧ ಸೂಕ್ತ ಕ್ರಮದ ಎಚ್ಚರಿಕೆ ನೀಡಿದರು.
ಈ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕರಾವಳಿಯಲ್ಲಿ ಕಳೆದ ಹತ್ತು ದಿನಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಆಗಿದ್ದು ಎಲ್ಲೆಡೆ ತೀವ್ರ ಹಾನಿಯುಂಟಾಗಿದೆ. ಸಮುದ್ರ ತೀರದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ಕಡಲ್ಕೊರೆತ ತಡೆಗೆ ಶಾಶ್ವತ ತಡೆಗೋಡೆ ರಚನೆಯೇ ಪರಿಹಾರವಾಗಿದೆ ಎಂದರು.
ಕಡಲ್ಕೊರೆತ ತಡೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಯೋಜನೆ ರೂಪಿಸಲಿದೆ. ಕೆಲವೇ ವರ್ಷಗಳಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣ ಆಗಲಿದೆ. ಮೂಳೂರಿನ ಕಡಲ್ಕೊರೆತ ಪ್ರದೇಶಗಳಲ್ಲಿ ಆದ್ಯತೆಯ ಮೇರೆಗೆ ತುರ್ತು ತಡೆಗೋಡೆ ಜಿಲ್ಲಾಧಿಕಾರಿ ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್, ಸಹಾಯಕ ಕಮಿಷನರ್ ರಾಜು ಕಾಪು ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶಿವ ಪ್ರಕಾಶ್, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ್ ನಾವಡ, ಪುರಸಭೆ ಸದಸ್ಯರಾದ ಸತೀಶ್ಚಂದ್ರ, ಮೊಹಮ್ಮದ್ ಆಸಿಫ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯೆ ಕೇಸರಿ ಯುವರಾಜ್ ಮೊದಲಾದವರು ಉಪಸ್ಥಿತರಿದ್ದರು.