Advertisement
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ವರ್ಷ ಆಷಾಢ ಮಾಸದಲ್ಲಿ ಚಾಮುಂಡಿ ಬೆಟ್ಟದ ಮೆಟ್ಟಿಲುಗಳನ್ನು ಹತ್ತುತ್ತಿದ್ದೆ. ಆದರೆ ಈ ವರ್ಷ ಸಚಿವರೆಲ್ಲ ದೇಹಲಿಯಲ್ಲೇ ಇರಬೇಕೆಂಬ ಆದೇಶ ಬಂದಿತ್ತು. ಈ ಹಿನ್ನೆಲೆಯಲ್ಲಿ ಆಷಾಢಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಮುಂದೆ ನವರಾತ್ರಿಗೆ ಬಂದು ಮೆಟ್ಟಿಲು ಹತ್ತುತ್ತೇನೆ ಎಂದರು.
Related Articles
Advertisement
ಕೋವಿಡ್ ನಿಂದ ಕೃಷಿಗೆ ತೊಡಕಾಗಿದೆ ಎಂದೇನಿಲ್ಲ. ದೇಶದಲ್ಲಿ ದಾಖಲೆ ಪ್ರಮಾಣದಲ್ಲಿ ಆಹಾರ ಪದಾರ್ಥಗಳ ಶೇಖರಣೆ ಆಗಿರುವುದನ್ನು ವರದಿಗಳು ಹೇಳುತ್ತಿವೆ. ಕೋವಿಡ್ ಸಂದರ್ಭದಲ್ಲೂ ದೇಶದಲ್ಲಿ ದಾಖಲೆ ಪ್ರಮಾಣದ ಕೃಷಿ ಉತ್ಪನ್ನ ಶೇಖರಣೆಯಾಗಿದೆ. ಅದೇ ರೀತಿ ದಾಖಲೆ ಪ್ರಮಾಣದಲ್ಲಿ ಹಣ್ಣು ತರಕಾರಿ ಬೆಳೆಯಲಾಗಿದೆ. ನಗರಗಳಲ್ಲಿ ಇದ್ದ ನಮ್ಮ ಯುವಕರು ಹಳ್ಳಿಗೆ ಹೋಗಿ ಕೃಷಿ ಮಾಡಿದರ ಪರಿಣಾಮ ಇದು ಸಾಧ್ಯವಾಗಿದೆ ಎಂದರು.
ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವೆ, ಇದೊಂದು ತೀರ್ವ ಖಂಡನೀಯ ವಿಚಾರ. ಪ್ರಜಾಪ್ರಭುತ್ವ ರಾಷ್ಟ್ರಗಳ ಮೇಲೆ ಇಂತಹ ದಾಳಿ ನಡೆಯುತ್ತಿರುವುದು ಆತಂಕ ತಂದಿದೆ. ಆಫ್ಘಾನಿಸ್ತಾನದ ಪಕ್ಕದಲ್ಲೇ ಪಾಕಿಸ್ತಾನ ಇದೆ. ಈ ವಿಚಾರದಲ್ಲಿ ಎಲ್ಲಾ ದೇಶಗಳು ಒಟ್ಟಾಗಿ ದನಿ ಎತ್ತಬೇಕು. ವಿಶ್ವಸಂಸ್ಥೆ ಮೇಲೆ ಒತ್ತಡ ಏರಿ ಸಮಸ್ಯೆ ಬಗೆ ಹರಿಸಬೇಕು ಎಂದರು.