Advertisement

ಕೇಂದ್ರ ಸಚಿವೆ ಸ್ಮೃತಿ ಇರಾನಿ ಧರ್ಮಸ್ಥಳಕ್ಕೆ ಭೇಟಿ

04:57 PM Nov 22, 2022 | Team Udayavani |

ಬೆಳ್ತಂಗಡಿ: ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಮಂಗಳವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದರು.

Advertisement

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷದೀಪೋತ್ಸವ ಪ್ರಯುಕ್ತ ನ.22 ರ ಸರ್ವಧರ್ಮ 90 ನೇ ಅಧಿವೇಶನ ಉದ್ಘಾಟನೆ ನೆರವೇರಿಸಲಿರುವ ಅವರು ದೆಹಲಿಯಿಂದ ನೇರವಾಗಿ ಮಂಗಳೂರು ವಿಮಾನ ನಿಲ್ದಾಣ ಬಂದಿಳಿದು ಬಳಿಕ ಮಾರ್ಗದ ಮೂಲಕ ಧರ್ಮಸ್ಥಳ ತಲುಪಿದರು.

ಈ ವೇಳೆ ಡಿ.ಸುರೇಂದ್ರ ಕುಮಾರ್, ಶ್ರದ್ಧಾ ಅಮಿತ್, ಡಿ.ಶ್ರೇಯಸ್ ಕುಮಾರ್, ನೀತಾ ರಾಜೇಂದ್ರ ಕುಮಾರ್ ಮತ್ತು ಎಂ.ಎಲ್.ಸಿ. ಕೆ.ಪ್ರತಾಪಸಿಂಹ ನಾಯಕ್ ಸ್ವಾಗತಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next