Advertisement

USA ಪ್ರವಾಸ ವೈಯಕ್ತಿಕ; ಊಹಾಪೋಹಗಳಿಗೆ ಕಿವಿಗೊಡಬೇಡಿ: ಡಿ.ಕೆ.ಶಿವಕುಮಾರ್ ಮನವಿ

08:18 PM Sep 08, 2024 | Team Udayavani |

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(DK Shivakumar)  ಅವರು ಅಮೆರಿಕ(USA) ಪ್ರವಾಸ ಕೈಗೊಳ್ಳುತ್ತಿದ್ದು ಈ ಕುರಿತು ಭಾರೀ ಊಹಾಪೋಹಗಳು ಹರಿದಾಡಿವೆ.

Advertisement

ವದಂತಿಗಳ ಕುರಿತು ಮಾಧ್ಯಮಗಳಲ್ಲಿ, ಸಾಮಾಜಿಕ ತಾಣಗಳಲ್ಲಿ ಭಾರೀ ಸುದ್ದಿಯಾಗುತ್ತಿರುವ ಬೆನ್ನಲ್ಲೇ ರವಿವಾರ (ಸೆ.8) ಡಿ.ಕೆ.ಶಿವಕುಮಾರ್ ಅವರು ಸಾಮಾಜಿಕ ತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಮಾಧ್ಯಮ ಪ್ರಕಟಣೆಯ ಮೂಲಕವೂ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ.

”ನಾನು ಕೈಗೊಳ್ಳುತ್ತಿರುವ ಅಮೆರಿಕ ಪ್ರವಾಸಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ವದಂತಿಗಳ ಬಗ್ಗೆ ನನ್ನ ಸ್ಪಷ್ಟನೆ ಇದು. ಈ ಪ್ರವಾಸವು ವೈಯಕ್ತಿಕವಾಗಿದ್ದು, ಯಾವುದೇ ರಾಜಕೀಯ ಉದ್ದೇಶವನ್ನು ಹೊಂದಿಲ್ಲ. ಅಥವಾ ನನಗೆ ಯಾವುದೇ ರಾಜಕೀಯ ಆಹ್ವಾನಗಳೂ ಬಂದಿಲ್ಲ. ಸಾರ್ವಜನಿಕರು ಯಾವುದೇ ರೀತಿಯ ಊಹಾಪೋಹಗಳಿಗೆ ಕಿವಿಗೊಡದಂತೆ ವಿನಂತಿಸುತ್ತೇನೆ” ಎಂದು ಪೋಸ್ಟ್ ಮಾಡಿದ್ದಾರೆ.

ಸುದ್ದಿಯಾಗಿದ್ದೇನು?
ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ. ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರಿ ಅಹ್ವಾನ ನೀಡಿರುವ ಮೇರೆಗೆ ಡಿ.ಕೆ.ಶಿವಕುಮಾರ್ ಅವರು ಅಮೆರಿಕ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂದು ವರದಿಯಾಗಿತ್ತು. ಅದನ್ನು ಹಲವರು ಹಂಚಿಕೊಂಡಿದ್ದಾರೆ.

 

Advertisement

Advertisement

Udayavani is now on Telegram. Click here to join our channel and stay updated with the latest news.

Next