ಮಹಾನಗರ: ದೇಶಕ್ಕೆ ಸ್ವಾತಂತ್ರ್ಯದ ಮೂಲಕ ಭದ್ರ ಬುನಾದಿ ಯನ್ನು ಹಾಕಿ ಕೊಟ್ಟು ಸಾಮಾಜಿಕ ನ್ಯಾಯ ಒದಗಿಸಿದ ಕಾಂಗ್ರೆಸ್ ಪಕ್ಷವು ದೇಶಕ್ಕೆ ಅನಿವಾರ್ಯವಾಗಿದೆ. ಕಾಂಗ್ರೆಸ್‌ನ ತತ್ತ್ವ ಸಿದ್ಧಾಂತಗಳಿಂದ ಮಾತ್ರ ದೇಶದ ಏಕತೆ, ಅಖಂಡತೆ ಸಾಧ್ಯ ಎಂದು ಮಾಜಿ ಸಚಿವ ಝಮೀರ್ ಅಹಮದ್ ಹೇಳಿದರು.
ಶನಿವಾರ ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ನಡೆದ ಕಾಂಗ್ರೆಸ್ ಪಕ್ಷದ 134ನೇ ಸ್ಥಾಪನ ದಿನಾಚರಣೆ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿದ್ದರು. ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಪ್ರಬಲ ಜಾತ್ಯತೀತ ಪಕ್ಷವಾದ ಕಾಂಗ್ರೆಸ್‌ನಿಂದ ಕೋಮು ಶಕ್ತಿಗಳನ್ನು ಮಣಿಸಲು ಸಾಧ್ಯವಿದೆ. ಜಾತ್ಯತೀತ ಮನೋಭಾವದವರು ಮಾತ್ರ ಕಾಂಗ್ರೆಸ್‌ನಲ್ಲಿದ್ದು ದೇಶದ ಪ್ರಗತಿಗೆ ಕಾರಣೀ ಭೂತರಾಗಿದ್ದಾರೆ ಎಂದು ಅವರು ಹೇಳಿದರು.
ವಿಧಾನ ಪರಿಷತ್ ಸದಸ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿ ಪ್ರಸ್ತಾವನೆಗೈದರು. ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಮಾಜಿ ಶಾಸಕರಾದ ಶಕುಂತಲಾ ಶೆಟ್ಟಿ, ಜೆ.ಆರ್. ಲೋಬೋ, ಕಾಂಗ್ರೆಸ್ ಮುಖಂಡರಾದ ಪಿ.ವಿ. ಮೋಹನ್, ಧನಂಜಯ ಅಡ³ಂಗಾಯ, ಲಾವಣ್ಯಾ ಬಲ್ಲಾಳ್, ಲೋಕೇಶ್ ಹೆಗ್ಡೆ, ಪದ್ಮನಾಭ ನರಿಂಗಾನ, ಸದಾಶಿವ ಶೆಟ್ಟಿ, ವಿಶ್ವಾಸ್ ಕುಮಾರ್ ದಾಸ್, ಜೆ. ಅಬ್ದುಲ್ ಸಲೀಂ, ಸಂತೋಷ್ ಕುಮಾರ್ ಶೆಟ್ಟಿ ಅಸೈಗೋಳಿ, ಗಣೇಶ್ ಪೂಜಾರಿ, ನೀರಜ್ ಪಾಲ್, ಸಂತೋಷ್ ಕುಮಾರ್ ಶೆಟ್ಟಿ, ನಝೀರ್ ಬಜಾಲ್, ಟಿ.ಕೆ. ಸುಧೀರ್ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ ಉಳ್ಳಾಲ ಸ್ವಾಗತಿಸಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ ವಂದಿಸಿದರು.
ಜನರಲ್ಲಿ ಗೊಂದಲ
ಶಾಸಕ ಯು.ಟಿ ಖಾದರ್ ಮಾತನಾಡಿ, ಕೇಂದ್ರ ಸರಕಾರವು ತರಲು ಉದ್ದೇಶಿಸಿರುವ ವಿವಾದಿತ ಎನ್.ಆರ್.ಸಿ. ಮಸೂದೆಯು ಜನರಲ್ಲಿ ಗೊಂದಲವನ್ನು ಉಂಟು ಮಾಡಿದ್ದು, ದೇಶಕ್ಕೆ ಅಪಾಯದ ಮುನ್ಸೂಚನೆಯಾಗಿದೆ. ಇದರ ವಿರುದ್ಧ ಕಾಂಗ್ರೆಸ್ ತಳಮಟ್ಟದಿಂದ ಜನಜಾಗೃತಿ ಮೂಡಿಸಲಿದೆ ಎಂದರು.