Advertisement

Czech Republic; ಪ್ರೇಗ್‌ನ ವಿ.ವಿ. ಕ್ಯಾಂಪಸ್‌ನಲ್ಲಿ ಶೂಟ್‌ಔಟ್‌: 10 ಮಂದಿ ಸಾವು

12:30 AM Dec 22, 2023 | Team Udayavani |

ಪ್ರೇಗ್‌: ಜೆಕ್‌ ಗಣರಾಜ್ಯದ ರಾಜಧಾನಿ ಪ್ರೇಗ್‌ನ ಚಾರ್ಲ್ಸ್‌ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಅಪರಿಚಿತ ಬಂದೂಕುಧಾರಿ ಗುರುವಾರ ನಡೆಸಿದ ಗುಂಡಿನ ದಾಳಿಯಲ್ಲಿ 10 ಮಂದಿ ಮೃತಪಟ್ಟಿದ್ದು, ಅನೇಕರು ಗಾಯಗೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಬಂದೂಕುಧಾರಿಯನ್ನು ಜೆಕ್‌ ಪೊಲೀಸರು ಹೊಡೆದುರುಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಗಾಯಗೊಂಡ 12ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶೂಟ್‌ಔಟ್‌ ಹಿಂದಿನ ಕಾರಣ ತಿಳಿದುಬಂದಿಲ್ಲ. ಘಟನೆ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next