Advertisement

ಸ್ಕ್ಯಾನ್‌ ಮಾಡುತ್ತಿದ್ದಾಗ ಸಂಸದೆ ನವನೀತ್ ಫೋಟೋ ಕ್ಲಿಕ್ : ಪ್ರಕರಣ ದಾಖಲು

03:38 PM May 12, 2022 | Team Udayavani |

ಮುಂಬಯಿ: ಅಮರಾವತಿ ಸಂಸದೆ ನವನೀತ್ ರಾಣಾ ಅವರು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನ್‌ಗೆ ಒಳಗಾಗುತ್ತಿದ್ದಾಗ ಅವರ ಫೋಟೋಗಳನ್ನು ಕ್ಲಿಕ್ಕಿಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ಮುಂಬಯಿ ಪೊಲೀಸರು ಬುಧವಾರ (ಮೇ 11) ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಬಾಂದ್ರಾ ಉಪನಗರದಲ್ಲಿರುವ ಲೀಲಾವತಿ ಆಸ್ಪತ್ರೆಯ ಭದ್ರತಾ ಅಧಿಕಾರಿಗಳು ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ದೂರಿನ ಪ್ರಕಾರ, ಮೊಬೈಲ್ ಫೋನ್‌ಗಳಂತಹ ಎಲೆಕ್ಟ್ರಾನಿಕ್ ಸಾಧನಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿರುವ ಎಂಆರ್‌ಐ ವಿಭಾಗಕ್ಕೆ ಅಪರಿಚಿತ ವ್ಯಕ್ತಿಯೊಬ್ಬರು ಪ್ರವೇಶಿಸುವ ಮೂಲಕ ರಾಣಾ ಅವರ ಫೋಟೋಗಳನ್ನು ಕ್ಲಿಕ್ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಖಾಸಗಿ ನಿವಾಸ ‘ಮಾತೋಶ್ರೀ’ ಹೊರಗೆ ಹನುಮಾನ್ ಚಾಲೀಸಾ ಪಠಿಸುವುದಾಗಿ ಘೋಷಿಸಿ ಈ ತಿಂಗಳ ಆರಂಭದಲ್ಲಿ ರಾಜದ್ರೋಹ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ನವನೀತ್ ರಾಣಾ ಮತ್ತು ಅವರ ಪತಿ ಶಾಸಕ ರವಿ ರಾಣಾ ಅವರು ಜಾಮೀನು ಪಡೆದ ನಂತರ ಆಸ್ಪತ್ರೆಗೆ ದಾಖಲಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next