Advertisement

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

09:23 PM Sep 16, 2024 | Team Udayavani |

ಯಳಂದೂರು: ತಾಲೂಕಿನ ಯರಿಯೂರು ಗ್ರಾಮದ ಬಳಿ ಅಪರಿಚಿತ ಕಾರು ಡಿಕ್ಕಿ ಹೊಡೆದು ಇಬ್ಬರು ಗಾಯಗೊಂಡಿರುವ ಘಟನೆ ಸೋಮವಾರ ರಾತ್ರಿ 7.30ಕ್ಕೆ ನಡೆದಿದೆ.

Advertisement

ಯರಿಯೂರು ಗ್ರಾಮದ ರತ್ನಮ್ಮ (55) ಹಾಗೂ ಶಂಭುಲಿಂಗ ನಾಯಕ (80) ಗಾಯಗೊಂಡ ವ್ಯಕ್ತಿಗಳಾಗಿದ್ದಾರೆ.

ಇವರಿಬ್ಬರೂ ಸಹೋದರ, ಸಹೋದರಿಯರಾಗಿದ್ದು ಗುಂಬಳ್ಳಿ ಗ್ರಾಮದಿಂದ ಯರಿಯೂರು ಗ್ರಾಮಕ್ಕೆ ಆಟೋದಲ್ಲಿ ಬರುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಲ್ಲಿಂದ ಪರಾರಿಯಾಗಿದೆ.

ತೀವ್ರವಾಗಿ ಗಾಯಗೊಂಡಿರುವ ಇವರನ್ನು ಯಳಂದೂರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯನ್ನು ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.

ಈ ಸಂಬಂಧ ಯಳಂದೂರು ಪಟ್ಟಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ವಹಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next