Advertisement

ಪಠ್ಯದಲ್ಲಿ ಭಗತ್ ಸಿಂಗ್ ಉಪಸ್ಥಿತಿ : ಕರ್ನಾಟಕ ಸರಕಾರಕ್ಕೆ ಟಾಂಗ್ ನೀಡಿದ ಕೇರಳ ಸಚಿವ

06:01 PM May 18, 2022 | Team Udayavani |

ಬೆಂಗಳೂರು: ರಾಜಯದಲ್ಲಿ ಪಠ್ಯದಲ್ಲಿ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಪಾಠವನ್ನು ಕೈಬಿಟ್ಟಿರುವ ಕುರಿತಾಗಿ ಭಾರಿ ಚರ್ಚೆ ನಡೆಯುತ್ತಿರುವ ವೇಳೆ ಕೇರಳದ ಶಿಕ್ಷಣ ಸಚಿವ ವಿ.ಶಿವನ್‌ಕುಟ್ಟಿ ಟ್ವೀಟ್ ಮೂಲಕ ಕರ್ನಾಟಕ ಸರಕಾರಕ್ಕೆ ಟಾಂಗ್ ನೀಡಿದ್ದಾರೆ.

Advertisement

ಕರ್ನಾಟಕದ ಹೆಸರು ಬಳಸದೆ “ಕೆಲವು ರಾಜ್ಯಗಳಿಗಿಂತ ಭಿನ್ನವಾಗಿ, ಕೇರಳವು ನಮ್ಮ ಪಠ್ಯಕ್ರಮದಲ್ಲಿ ಭಗತ್ ಸಿಂಗ್ ಅವರ ಜೀವನದ ಉಪಸ್ಥಿತಿಯನ್ನು ಖಚಿತಪಡಿಸುತ್ತದೆ” ಎಂದು ಕೇರಳ ಶಿಕ್ಷಣ ಮತ್ತು ಕಾರ್ಮಿಕ ಸಚಿವ ವಿ.ಶಿವನ್‌ಕುಟ್ಟಿ ಟ್ವೀಟ್ ಮಾಡಿದ್ದಾರೆ.

10ನೇ ತರಗತಿ ಪಠ್ಯದಿಂದ ಸ್ವಾತಂತ್ರ್ಯ ಹೋರಾಟಗಾರ ಭಗತ್‌ ಸಿಂಗ್‌ ಕುರಿತ ಪಾಠವನ್ನು ಕೈಬಿಟ್ಟಿಲ್ಲ ಎಂದು ಕರ್ನಾಟಕ ಪಠ್ಯಪುಸ್ತಕ ಸಂಘವು ಸ್ಪಷ್ಟನೆ ನೀಡಿದೆ. ಸದ್ಯ ಪರಿಷ್ಕರಿಸಿರುವ 10ನೇ ತರಗತಿ ಪ್ರಥಮ ಭಾಷೆ ಕನ್ನಡ ಪಠ್ಯಪುಸ್ತಕವು ಪ್ರಸ್ತುತ ಮುದ್ರಣ ಹಂತದಲ್ಲಿದೆ ಎಂದು ಸಂಘದ ವ್ಯವಸ್ಥಾಪಕ ನಿರ್ದೇಶಕ ಮಾದೇಗೌಡ ಪ್ರಕಟನೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ : ತಿಳಿಗೇಡಿ ಯುವಕನಿಂದ ಪಠ್ಯ ಪರಿಷ್ಕರಣೆ ಮಾಡಿಸಿದ್ದಾರೆ: ಸಿದ್ದರಾಮಯ್ಯ ಕಿಡಿ

Advertisement

ಭಗತ್‌ಸಿಂಗ್‌ ಕುರಿತ ಅಧ್ಯಾಯವನ್ನು ಕೈಬಿಟ್ಟು ಆರೆಸ್ಸೆಸ್‌ ಸಂಸ್ಥಾಪಕ ಕೇಶವ ಬಲಿರಾಮ ಹೆಡ್ಗೆವಾರ್ ಭಾಷಣ ಸೇರ್ಪಡೆ ಮಾಡಲಾಗಿದೆ ಎಂಬ ವಿಚಾರ ವಿವಾದಕ್ಕೆ ಗುರಿಯಾಗಿ ವಿಪಕ್ಷಗಳು ಸರಕಾರದ ವಿರುದ್ಧ ಮುಗಿಬಿದ್ದಿದ್ದವು.

Advertisement

Udayavani is now on Telegram. Click here to join our channel and stay updated with the latest news.

Next