ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಅನ್ ಲಾಕ್ 3.0 ನಾಳೆ (ಸೋಮವಾರ) ಅಂತ್ಯಗೊಳ್ಳಲಿದೆ. ಹೀಗಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಸಭೆ ನಡೆಸಿದರು.
ಸಿಎಂ ಇಂದು ತಮ್ಮ ನಿವಾಸದಲ್ಲಿ ಸಚಿವರು ಹಾಗು ಅಧಿಕಾರಿಗಳ ಜೊತೆ ಕೋವಿಡ್ -19, ಅನ್ ಲಾಕ್ 4 ರ ಕುರಿತು ಚರ್ಚೆ ನಡೆಸಿದರು. ಸಭೆಯಲ್ಲಿ ಉಪಮುಖ್ಯಮಂತ್ರಿ ಆಶ್ವಥ ನಾರಾಯಣ, ಸಚಿವರುಗಳಾದ ಆರ್. ಅಶೋಕ್, ಅರವಿಂದ ಲಿಂಬಾವಳಿ, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ನೈಟ್ ಕರ್ಪ್ಯುನ್ನು ರಾತ್ರಿ 10 ರಿಂದ ಬೆಳಗ್ಗೆ 5 ರ ವರಗೆ ವಿಧಿಸಲು ಈ ಸಭೆಯಲ್ಲಿ ತೀರ್ಮಾನಿಸಲಾಯಿತು. ಪ್ರಮುಖವಾಗಿ ಸಿನಿಮಾ ಥಿಯೇಟರ್, ರಂಗಮಂದಿರಗಳನ್ನು ಶೇ. 50 ರಷ್ಟು ಗ್ರಾಹಕರೊಂದಿಗೆ ತೆರೆಯಲು ಅವಕಾಶ ನೀಡಲು ಇಂದಿನ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಇದನ್ನೂ ಓದಿ:ಕೇರಳದಲ್ಲಿ ಲಾಕ್ ಡೌನ್ ನಿಯಮಗಳ ಸಡಿಲಿಕೆ: ದೇವಸ್ಥಾನ, ಸಲೂನ್ ತೆರೆಯಲು ಅವಕಾಶ
ಉನ್ನತ ಶಿಕ್ಷಣ ಕಾಲೇಜುಗಳನ್ನು ಜು. 26 ರಿಂದ ಪ್ರಾರಂಭ ಮಾಡಲು ಅವಕಾಶ ನೀಡಲಾಯಿತು. ಕನಿಷ್ಠ ಒಂದು ಡೋಸ್ ಕೋವಿಡ್ ವ್ಯಾಕ್ಸಿನ್ ಹಾಕಿಸಿಕೊಂಡವರೆಗೆ ಮಾತ್ರ ಅವಕಾಶ ನೀಡಲಾಗಿದೆ.