Advertisement

Unlock Raghava; ಸದ್ದು ಮಾಡುತ್ತಿದೆ ‘ಮೂಡ್ಸ್ ಆಫ್ ರಾಘವ’ ಟೀಸರ್

03:53 PM Oct 09, 2023 | Team Udayavani |

ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ ಚಿತ್ರಗಳಲ್ಲಿ “ಅನ್ಲಾಕ್ ರಾಘವ” ಕೂಡ ಒಂದು. ಚಿತ್ರ ಸೆಟ್ಟೇರಿದ ದಿನದಿಂದಲೂ ಹಲವಾರು ವಿಶೇಷತೆಗಳಿಂದ ಎಲ್ಲರ ಗಮನ ಸೆಳೆಯುತ್ತಿದೆ.ಇದೀಗ ‘ಮೂಡ್ಸ್ ಆಫ್ ರಾಘವ’ ಎಂಬ ಹೆಸರಿನಲ್ಲಿ ಚಿತ್ರದ ಟೀಸರ್ ಬಿಡುಗಡೆ ಮಾಡಿದೆ.

Advertisement

ಮಿಲಿಂದ್ ನಾಯಕನಾಗಿ ಹಾಗೂ ರೇಚಲ್ ಡೇವಿಡ್ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದಾರೆ. ಸಾಧುಕೋಕಿಲ, ಅವಿನಾಶ್, ಶೋಭರಾಜ್, ರಮೇಶ್ ಭಟ್, ವೀಣಾ ಸುಂದರ್, ಸುಂದರ್, ಧರ್ಮಣ್ಣ ಕಡೂರು, ಸಾಯಿ ಕುಡ್ಲ, ಭೂಮಿ ಶೆಟ್ಟಿ, ಮೂಗೂರು ಸುರೇಶ್ ಹಾಗೂ ಮತ್ತಿತರ ಕಲಾವಿದರು ಚಿತ್ರದ ಪ್ರಮುಖ ತಾರಾಗಣದಲ್ಲಿದ್ದಾರೆ.

‘ಅನ್ ಲಾಕ್ ರಾಘವ’ ಚಿತ್ರವನ್ನು ಮಯೂರ ಮೋಷನ್ ಪಿಕ್ಚರ್ಸ್ ಬ್ಯಾನರ್ ನಡಿ ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ಜಂಟಿಯಾಗಿ ನಿರ್ಮಿಸುತ್ತಿದ್ದು, ದೀಪಕ್ ಮಧುವನಹಳ್ಳಿ ಅವರು ಆ್ಯಕ್ಷನ್ ಕಟ್ ಹೇಳಿದ್ದಾರೆ. ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸತ್ಯಪ್ರಕಾಶ್ ಕಥೆ-ಚಿತ್ರಕಥೆ-ಸಂಭಾಷಣೆ ಬರೆದಿದ್ದು, ಲವಿತ್ ಛಾಯಾಗ್ರಾಹಣ, ಅನೂಪ್ ಸೀಳಿನ್ ಸಂಗೀತ, ಅಜಯ್ ಕುಮಾರ್ ಸಂಕಲನ ಚಿತ್ರಕ್ಕಿದೆ.

ಧನಂಜಯ್ ಮಾಸ್ಟರ್ ಹಾಗೂ ಮುರಳಿ ಮಾಸ್ಟರ್ ನೃತ್ಯನಿರ್ದೇಶನದಲ್ಲಿ ಹಾಡುಗಳು ಮೂಡಿಬಂದಿದ್ದು, ವಿನೋದ್ ಮಾಸ್ಟರ್ ಮತ್ತು ಅರ್ಜುನ್ ಮಾಸ್ಟರ್ ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next