Advertisement

ಉನ್ನಾವೋ ಆರೋಪಿಗಳನ್ನು ಹೈದರಾಬಾದ್ ಶೈಲಿಯಲ್ಲಿ ಎನ್ ಕೌಂಟರ್ ಮಾಡಿ: ನೆಟ್ಟಿಗರ ಆಗ್ರಹ

09:51 AM Dec 08, 2019 | Team Udayavani |

ನವದೆಹಲಿ: ಸಾವಿನೊಂದಿಗೆ ಹೋರಾಟ ನಡೆಸುತ್ತಿದ್ದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಶುಕ್ರವಾರ ತಡರಾತ್ರಿ 11;30 ಕ್ಕೆ ಹೈದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಘಟನೆ ಕುರಿತು ಎಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ಹೈದರಬಾದ್ ಎನ್ ಕೌಂಟರ್ ಮಾದರಿಯಲ್ಲೇ ಆರೋಪಿಗಳನ್ನು ಶಿಕ್ಷೆಗೆ ಗುರಿಪಡಿಸುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ.

Advertisement

24 ವರ್ಷದ ಯುವತಿಯನ್ನು ಕಳೆದ ವರ್ಷದ ಡಿಸೆಂಬರ್ ತಿಂಗಳಿನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಪಡಿಸಲಾಗಿತ್ತು. ಕಳೆದ ಗುರುವಾರದಂದು ಈ ಅತ್ಯಾಚಾರ ಪ್ರಕರಣದ ಇಬ್ಬರು ಆರೋಪಿಗಳು ಮತ್ತು ಇತರೇ ಮೂವರು ಸೇರಿದಂತೆ ಒಟ್ಟು ಐದು ಮಂದಿಯ ತಂಡ ಆಕೆಯ ಮೇಲೆ ಹಲ್ಲೆ ನಡೆಸಿ ಬಳಿಕ ಬೆಂಕಿ ಹಚ್ಚಿದ್ದರು. ಸಂತ್ರಸ್ತೆಯ ಮೇಲೆ ಹಲ್ಲೆ ನಡೆಸಿ ಬೆಂಕಿ ಇಟ್ಟ ಐವರ ಪೈಕಿ ಒಬ್ಬಾತ ಕೆಲ ದಿನಗಳ ಹಿಂದಷ್ಟೇ ಜಾಮೀನು ಪಡೆದು ಹೊರಬಂದಿದ್ದ. ಸಂತ್ರಸ್ತೆ ತನ್ನ ಮೇಲಿನ ಅತ್ಯಾಚಾರ ಪ್ರಕರಣದ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಉನ್ನಾವೋದಲ್ಲಿ ಆಕೆಯ ಮೇಲೆ ಹಲ್ಲೆ ನಡೆಸಲಾಗಿತ್ತು. ದುಷ್ಕರ್ಮಿಗಳು ಈಕೆಯ ಮೇಲೆ ಬೆಂಕಿ ಹಚ್ಚಿದ ಪರಿಣಾಮ ಈಕೆಯ ದೇಹಭಾಗ ಸುಮಾರು 90 ಪ್ರತಿಶತ ಸುಟ್ಟುಹೋಗಿತ್ತು.

ಘಟನೆಯ ಬಳಿಕ ಗಂಭೀರವಾದ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಸಂತ್ರಸ್ತೆಯನ್ನು ನವದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಶುಕ್ರವಾರ ರಾತ್ರಿ 11 ಗಂಟೆಯ ಸುಮಾರಿಗೆ ಸಂತ್ರಸ್ತೆಗೆ ಹೃದಯ ಸ್ತಂಭನವಾಗಿದೆ ಮತ್ತು 11.40ರ ಸುಮಾರಿಗೆ ಈಕೆ ಮೃತಪಟ್ಟಿದ್ದಾಳೆ ಎಂದು ಘೋಷಿಸಲಾಯಿತು.

ಈ ಕುರಿತು ಟ್ಟಿಟ್ಟರ್ ನಲ್ಲಿ #unnaorape, #UnnaoTruth ಎಂಬ ಹ್ಯಾಷ್ ಟ್ಯಾಗ್ ನಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಲಾಗುತ್ತಿದ್ದು, ದಿಶಾ ಅತ್ಯಾಚಾರಿ ಆರೋಪಿಗಳನ್ನು ಎನ್ ಕೌಂಟರ್ ಮಾಡಿದ ರೀತಿಯಲ್ಲೇ ಉನ್ನಾವೋ ಆರೋಪಿಗಳಿಗೆ ಶಿಕ್ಷೆ ನೀಡಿ ಎಂದು ಆಗ್ರಹಿಸಲಾಗುತ್ತಿದೆ.

ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಹೋರಾಟ ನಡೆಸಿದರೂ ಬದುಕುಳಿಯಲಿಲ್ಲ. ಘಟನೆ ಬಗ್ಗೆ ಉತ್ತರಪ್ರದೇಶ ಪೊಲೀಸರು ಯಾವ ಕ್ರಮ ಕೈಗೊಳ್ಳುತ್ತಾರೆ? ಹೈದರಬಾದ್ ಪೊಲೀಸರನ್ನು ಅನುಸರಿಸುತ್ತಾರೆಯೇ ? ಆರೋಪಿಗಳು ಈಗಾಗಲೇ ಜಾಮೀನಿನ ಮೇಲೆ ಹೊರಬಂದಿದ್ದಾರೆ! ನ್ಯಾಯ ಹೇಗೆ ಮೆಲುಗೈ ಸಾಧಿಸುತ್ತದೆ ಎಂಬುದನ್ನು ನೋಡೋಣ ಎಂದು ಹಲವರು ಟ್ವೀಟ್ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next