Advertisement
ಸರಕಾರದ ಇಲಾಖೆಗಳು, ನಿಗಮಗಳು, ಮಂಡಳಿಗಳು, ಸರಕಾರೇತರ ಸಂಘ-ಸಂಸ್ಥೆಗಳಲ್ಲಿ ಉಪಯೋಗಿಸುವ ಯಾವುದೇ ಖಾಸಗಿ ವಾಹನಗಳಲ್ಲಿ ಸ್ಥಳೀಯ ಸಂಸ್ಥೆಗಳ ಹೆಸರುಗಳನ್ನು, ಚಿಹ್ನೆ ಅಥವಾ ಲಾಂಛನಗಳನ್ನು ವಾಹನಗಳ ನೋಂದಣಿ ಫಲಕಗಳ ಮೇಲೆ ಅನಧಿಕೃತವಾಗಿ ಅಳವಡಿಸಿಕೊಳ್ಳುವುದು ಕೇಂದ್ರ ಮೋಟಾರು ವಾಹನ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಕುರಿತು ಹೈಕೋರ್ಟ್ ಕೂಡ ಆದೇಶ ಹೊರಡಿಸಿದೆ. ಅದರಂತೆ ತೆರವುಗೊಳಿಸಲು ಸೂಚಿಸಲಾಗಿದೆ. ಹತ್ತು ದಿನಗಳಲ್ಲಿ ತೆರವಾಗದಿದ್ದರೆ, ನ್ಯಾಯಾಂಗ ನಿಂದನೆ ಆರೋಪದ ಜತೆಗೆ ನಿಯಮ ಉಲ್ಲಂಘನೆ ಅಡಿ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆ ಆಯುಕ್ತ ಟಿ.ಎಚ್.ಎಂ. ಕುಮಾರ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
Related Articles
Advertisement
ದುರ್ಬಳಕೆ ತಪ್ಪಿಸಲು ಸಾರಿಗೆ ಇಲಾಖೆ ಸಹಾಯವಾಣಿ ಆರಂಭಿಸಿದ್ದು, ನಿಯಮ ಉಲ್ಲಂಘಿಸಿರುವುದು ಕಂಡುಬಂದಲ್ಲಿ ವಾಟ್ಸ್ ಆ್ಯಪ್ ಸಂಖ್ಯೆ: 9449863459 ಇಲ್ಲಿಗೆ ಮಾಹಿತಿ ನೀಡಬೇಕು ಎಂದು ಕುಮಾರ್ ಮನವಿ ಮಾಡಿದರು.