Advertisement

ಬಿಜೆಪಿ ರಾಜ್ಯಾಧ್ಯಕ್ಷರನ್ನು ಭೇಟಿಯಾದ ಅನರ್ಹರು

10:54 PM Oct 05, 2019 | Lakshmi GovindaRaju |

ಬೆಂಗಳೂರು: ಅನರ್ಹ ಶಾಸಕರಾದ ಎಸ್‌.ಟಿ.ಸೋಮಶೇಖರ್‌, ಬೈರತಿ ಬಸವರಾಜು ಹಾಗೂ ಮುನಿರತ್ನ, ಬಿಜೆಪಿ ಕಚೇರಿಯಲ್ಲಿ ಶನಿ ವಾರ ಬಿಜೆಪಿ ಅಧ್ಯಕ್ಷ ಸಂಸದ ನಳಿನ್‌ ಕುಮಾರ್‌ರನ್ನು ಭೇಟಿ ಯಾಗಿ ಚರ್ಚಿಸಿದರು. ಅನರ್ಹರಿಗೆ ಬಿಜೆಪಿ ಟಿಕೆಟ್‌ ನೀಡುವ ಕುರಿತು ನಾಯಕರಲ್ಲಿ ಭಿನ್ನಾಭಿಪ್ರಾಯ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ಅಧ್ಯಕ್ಷರನ್ನು ಭೇಟಿಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ.

Advertisement

ಈ ಮೂವರು ಅನರ್ಹರು, ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಸಮ್ಮುಖದಲ್ಲಿ, ಇತರೆ ಅನರ್ಹರ ಪರವಾಗಿ ನಳಿನ್‌ ಕುಮಾರ್‌ ಕಟೀಲ್‌ರನ್ನು ಪಕ್ಷದ ಕಚೇರಿಯಲ್ಲಿ ಭೇಟಿಯಾಗಿ ಚರ್ಚಿಸಿದ್ದಾರೆ. ಸುಪ್ರೀಂ, ಉಪಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಿದರೆ ಪಕ್ಷದಿಂದ ಕಣಕ್ಕಿಳಿಯಲು ತಮಗೇ ಟಿಕೆಟ್‌ ನೀಡಬೇಕು. ತಮ್ಮ ತ್ಯಾಗದಿಂದಾಗಿ ಬಿಜೆಪಿ ಸರ್ಕಾರ ರಚನೆಯಾಗಿದೆ.

ತಮ್ಮ ರಾಜಕೀಯ ಭವಿಷ್ಯ ಹಾಗೂ ಬಿಜೆಪಿ ಸರ್ಕಾರದ ಉಳಿವಿನ ದೃಷ್ಟಿಯಿಂದ ಪಕ್ಷದಿಂದ ಸ್ಪರ್ಧಿಸಲು ಅವಕಾಶ ನೀಡಬೇಕು ಎಂಬುದಾಗಿ ಅನರ್ಹರು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಇದಕ್ಕೆ ನಳಿನ್‌ ಕುಮಾರ್‌ ಕಟೀಲ್‌ ಸಕಾ ರಾತ್ಮಕವಾಗಿ ಸ್ಪಂದಿಸಿದ್ದಾರೆ. ಸುಪ್ರೀಂ ಆದೇಶದಂತೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಅನರ್ಹರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಅಭಯ ನೀಡಿದ್ದಾರೆ ಎಂದು ಗೊತ್ತಾಗಿದೆ.

ಇತ್ತೀಚೆಗಷ್ಟೇ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದ ನಳಿನ್‌ ಕುಮಾರ್‌, ಅನರ್ಹ ಶಾಸಕರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಬೆನ್ನಲ್ಲೇ ಅನರ್ಹ ಶಾಸಕರು ಭೇಟಿಯಾಗಿ ಟಿಕೆಟ್‌ ಖಾತರಿಪಡಿಸಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next