ಹುಬ್ಬಳ್ಳಿ: ಅನಿಯಮಿತ ವಿದ್ಯುತ್ ಪೂರೈಕೆಯಿಂದ ಬೆಳೆ ಹಾಳಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ವಿವಿಧ ಜಿಲ್ಲೆಗಳ ರೈತರು ಮಂಗಳವಾರ ಇಲ್ಲಿನ ನವನಗರದ ಹೆಸ್ಕಾಂನ ಕೇಂದ್ರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ದಿನಕ್ಕೆ ಕೇವಲ 2 ರಿಂದ 3 ತಾಸು ಮಾತ್ರ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಇದರಿಂದ ಬೆಳೆಗಳು ಹಾಳಾಗುತ್ತಿವೆ. ಜೊತೆಗೆ ಮಳೆ ಕೂಡ ಇಲ್ಲ. ವಿದ್ಯುತ್ ಪೂರೈಕೆ ವಿಚಾರದಲ್ಲಿ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ರೈತರು, ದಿನದ 7ರಿಂದ 12 ತಾಸು ವಿದ್ಯುತ್ ಪೂರೈಕೆ ಮಾಡುವಂತೆ ಆಗ್ರಹಿಸಿದರು.
ಇದನ್ನೂ ಓದಿ:Kerala Airport: ಕೇರಳ ವಿಮಾನ ನಿಲ್ದಾಣದಲ್ಲಿ 44 ಕೋಟಿ ರೂ. ಮೌಲ್ಯದ ಮಾದಕ ವಸ್ತು ಪತ್ತೆ
ಹೆಸ್ಕಾಂ ಕೇಂದ್ರ ಕಚೇರಿ ಎದುರೇ ಅಡುಗೆ ಮಾಡಿದರು. ಹೆಸ್ಕಾಂ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು.
ಪ್ರತಿಭಟನೆಯಲ್ಲಿ ಹೆಸ್ಕಾಂ ವ್ಯಾಪ್ತಿಯ ಹುಬ್ಬಳ್ಳಿ-ಧಾರವಾಡ, ಗದಗ, ಹಾವೇರಿ, ಬೆಳಗಾವಿ ಸೇರಿದಂತೆ ಏಳು ಜಿಲ್ಲೆಗಳ ರೈತರು ಪಾಲ್ಗೊಂಡಿದ್ದಾರೆ.