Advertisement
ಸಭೆಯಲ್ಲಿ ವಿವಿಧ ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಮಂಜೂರಾತಿ ಪತ್ರಗಳನ್ನು ವಿತರಿಸ ಲಾಯಿತು. ಈದು ರಸ್ತೆ ಸಮಸ್ಯೆ ಬಗ್ಗೆ ಹಲವು ಬಾರಿ ಮನವಿ ಕೊಟ್ಟರೂ ಪ್ರಯೋಜನವಾಗದಿರುವ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಪರಿಣಾಮ ಸಭೆಯಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾನವಾಯಿತು.
Related Articles
Advertisement
ಈದು ರಸ್ತೆ ಸೇರಿದಂತೆ ಪಂಚಾಯತ್ ವ್ಯಾಪ್ತಿಯ ಬಹುತೇಕ ರಸ್ತೆಗಳು ಹಾಳಾಗಿ ಹೋಗಿವೆ. ಕಳೆದ ಹದಿನೈದು ವರ್ಷಗಳಿಂದ ಈ ಸಮಸ್ಯೆ ಬಗ್ಗೆ ಮಾತನಾಡುತ್ತಿದ್ದರೂ ಪ್ರಯೋಜನವಾಗಿಲ್ಲ. ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಸಾಧ್ಯವಾಗದಿದ್ದಲ್ಲಿ ಜನಪ್ರತಿ ನಿಧಿಗಳು ಅಧಿಕಾರದಿಂದ ಕೂಡಲೇ ಕೆಳಗಿಳಿಯಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ರಸ್ತೆಗಳ ಅವ್ಯವಸ್ಥೆಯಿಂದಾಗಿ ಬಾಡಿಗೆ ಪಡೆದ ದುಪ್ಪಟ್ಟು ಹಣವನ್ನು ರಿಪೇರಿಗೆ ನೀಡಬೇಕಾಗಿದೆ. ಇದರಿಂದ ಜೀವನ ನಡೆಸುವುದು ಕಷ್ಟವಾಗಿದೆ ಎಂದು ರಿಕ್ಷಾ ಚಾಲಕರು ಸಭೆಯಲ್ಲಿ ಅಳಲು ತೋಡಿಕೊಂಡರು.
ಉತ್ತರಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಎಚ್. ಪುರುಷೋತ್ತಮ್ ಅವರು, ಸಮಸ್ಯೆಗಳನ್ನು ಬಗೆಹರಿಸುವತ್ತ ಪ್ರಯತ್ನ ಮಾಡೋಣ. ರಸ್ತೆ ಸಮಸ್ಯೆ ಬಗ್ಗೆ ಶಾಸಕರಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದೆವೆ. ಪಿಡಬ್ಲ್ಯುಡಿ ರಸ್ತೆಯಾದುದರಿಂದ ಕಾಮಗರಿ ತಡ ವಾಗುತ್ತಿದೆ ಎಂದರು.
ಪಂಚಾಯತ್ ಅಭಿವೃಧ್ದಿ ಅಧಿಕಾರಿ ರಘುನಾಥ್ ನಿರೂಪಿಸಿದರು. ಈ ಸಂದರ್ಭ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ನೂರಾಳ್ ಬೆಟ್ಟು ಮತ್ತು ಈದು ಪರಿಸರ ವ್ಯಾಪ್ತಿಯು ನಕ್ಸಲ್ ಪ್ರದೇಶವಾಗಿದ್ದರಿಂದ ಮುನ್ನೆಚ್ಚರಿಕೆ ಅಗತ್ಯ. ಇದುವರೆಗೆ ಯಾವುದೆ ಪ್ರಕರಣಗಳು ಕಂಡು ಬಂದಿಲ್ಲವಾದರೂ ಸ್ಥಳೀಯರಿಗೆ ಈ ಕುರಿತು ಮಾಹಿತಿ ಇದ್ದಲ್ಲಿ ಪೋಲಿಸ್ ಠಾಣೆಗೆ ಮಾಹಿತಿ ನೀಡಿ. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಠಾಣಾಧಿಕಾರಿ ನಾಸಿರ್ ಹುಸೈನ್ ತಿಳಿಸಿದರು.
ನಕ್ಸಲ್ ಪ್ರದೇಶ: ಮಾಹಿತಿ ಕೊಡಿ