Advertisement

ಬಳಕೆಯಾಗದ ಜಿ.ಪಂ. ಅನುದಾನ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ನಿರ್ಣಯ

11:57 PM Jul 02, 2020 | Sriram |

ಉಡುಪಿ: ಉಡುಪಿ ಜಿ.ಪಂ.ನಲ್ಲಿ 2019-20ರ ಸಾಲಿನಲ್ಲಿ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ವಿಭಾಗದಿಂದ ಸುಮಾರು 24 ಕೋ.ರೂ. ಮೊತ್ತದ ಅನುದಾನ ಬಳಕೆಯಾಗದೆ ವಾಪಸ್‌ ಹೋಗಿದ್ದು, ಈ ಕುರಿತಂತೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಜಿ.ಪಂ. ನಿರ್ಣಯಿಸಿದೆ.

Advertisement

ಜಿ.ಪಂ.ನಲ್ಲಿ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ನಡೆದ ಜಿ.ಪಂ. ಸಾಮಾನ್ಯ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ವಿಭಾಗದ ಮೂಲಕ ಕೈಗೊಂಡ ಕಾಮಗಾರಿಗಳು ಮುಕ್ತಾಯಗೊಂಡು ಬಿಲ್ಲುಗಳು ಸಲ್ಲಿಕೆಯಾಗಿ ದ್ದರೂ ಸಹ ಖಜಾನೆಗೆ ಸಲ್ಲಿಸುವಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ಜಿಲ್ಲಾ ವಲಯ ಮತ್ತು ರಾಜ್ಯ ವಲಯದ ಒಟ್ಟು 24 ಕೋಟಿ ರೂ. ಅನುದಾನ ವಾಪಸ್‌ ಹೋಗಿದೆ.

ಈಗಾಗಲೇ ಕಾಮಗಾರಿಗಳು ಮುಕ್ತಾಯಗೊಂಡಿದ್ದು ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರರಿಗೆ ಸಕಾಲದಲ್ಲಿ ಹಣ ಪಾವತಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಕಾಮಗಾರಿ ನಿರ್ವಹಿಸಲು ಯಾರು ಮುಂದೆ ಬರುತ್ತಾರೆ? ಅನುದಾನದ ಸಮರ್ಪಕ ಬಳಕೆ ಮಾಡದೆ ಇರುವ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುವಂತೆ ನಿರ್ಣಯ ಸಿದ್ಧಪಡಿಸಿ ಇಲಾಖಾ ಮುಖ್ಯಸ್ಥರಿಗೆ ಸಲ್ಲಿಸಲು ಶಾಸಕ ರಘುಪತಿ ಭಟ್‌, ಜಿ.ಪಂ.ನ ಎಲ್ಲ ಸದಸ್ಯರು ಕೋರಿದರು.

ಈಗಾಗಲೇ ಇದರ ಕುರಿತು ಜಿ.ಪಂ. ವತಿಯಿಂದ ತನಿಖೆ ನಡೆಸಲು ಸಮಿತಿ ರಚಿಸಿದ್ದು ಅದರ ವರದಿ ಕೂಡ ಶೀಘ್ರದಲ್ಲಿ ದೊರೆಯಲಿದೆ. ನಿರ್ಣಯ ಸಹ ಸಿದ್ಧಪಡಿಸಿ ಇಲಾಖಾ ಮುಖ್ಯಸ್ಥರಿಗೆ ಕಳುಹಿಸ ಲಾಗುವುದು ಎಂದು ಸಿಇಒ ಪ್ರೀತಿ ಗೆಹ್ಲೋಟ್‌ ತಿಳಿಸಿದರು. ಸದಸ್ಯರಾದ ಶಿಲ್ಪಾ ಜಿ. ಸುವರ್ಣ, ಜ್ಯೋತಿ ಹರೀಶ್‌ ಮಾತನಾಡಿದರು. ಕಟ್ಟಡ ಒಡೆಯುವ ಸಂದರ್ಭ ಅಗತ್ಯ ನಿಯಮ ಪಾಲಿಸದೆ ನಿರ್ಲಕ್ಷ್ಯ ವಹಿಸಿದ್ದಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಿಇಒ ತಿಳಿಸಿದರು.

Advertisement

ಅರಣ್ಯ ಇಲಾಖೆಗೆ ಸಂಬಂಧಪಟ್ಟ ಸಮಸ್ಯೆ ಗಳನ್ನು ಕುಂದಾಪುರ ವಲಯ ಅರಣ್ಯಾಧಿಕಾರಿ ಆಶೀಶ್‌ ರೆಡ್ಡಿ ಶೀಘ್ರದಲ್ಲಿ ಬಗೆಹರಿಸಲು ಪ್ರಯತ್ನಿಸುವೆ ಎಂದರು. ಪಡುಬಿದ್ರಿಯಲ್ಲಿ ಸರ್ವಿಸ್‌ ರಸ್ತೆ ಕಾಮಗಾರಿ ವಿಳಂಬ ಹಾಗೂ ಚರಂಡಿ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳದ ಕಾರಣ ಮಳೆಗಾಲದಲ್ಲಿ ಸಮಸ್ಯೆಯಾಗಿದ್ದು ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಸದಸ್ಯ ಶಶಿಕಾಂತ ಪಡುಬಿದ್ರಿ ತಿಳಿಸಿದರು. ಈ ಕುರಿತಂತೆ ಸ್ಥಳ ಪರಿಶೀಲನೆ ನಡೆಸುವುದಾಗಿ ಅಧ್ಯಕ್ಷ ದಿನಕರ ಬಾಬು ತಿಳಿಸಿದರು.

ಮರಳು ಸಮಸ್ಯೆ ಬಗ್ಗೆ ಸದಸ್ಯ ಜನಾರ್ದನ ತೋನ್ಸೆಯವರ ಪ್ರಶ್ನೆಗೆ ಉತ್ತರಿಸಿದ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ರಾಂಜಿ ನಾಯ್ಕ, ರಾಜ್ಯದಲ್ಲಿ ಹೊಸದಾಗಿ ಕರ್ನಾಟಕ ಮರಳು ನೀತಿ -2020 ಜಾರಿಗೆ ಬಂದಿದ್ದು, ಆ ಪ್ರಕಾರ ಮರಳು ವಿತರಣೆ ನಡೆಯಲಿದ್ದು ರಾಜ್ಯಾದ್ಯಂತ ಏಕರೂಪದ ದರ ನಿಗದಿಯಾಗಲಿದೆ ಎಂದರು.

ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷ ಪ್ರತಾಪ್‌ ಹೆಗ್ಡೆ ಮಾರಾಳಿ, ಸಾಮಾಜಿಕ ನ್ಯಾಯ ಸ್ಥಾಯೀ ಸಮಿತಿ ಅಧ್ಯಕ್ಷೆ ಶೋಭಾ ಜಿ. ಪುತ್ರನ್‌, ಕೃಷಿ ಮತ್ತು ಕೈಗಾರಿಕಾ ಸ್ಥಾಯೀ ಸಮಿತಿ ಅಧ್ಯಕ್ಷ ಸುಮಿತ್‌ ಶೆಟ್ಟಿ, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್‌, ಉಪ ಕಾರ್ಯದರ್ಶಿ ಕಿರಣ್‌ ಪೆಡೆ°àಕರ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next