Advertisement
ಡಿಜಿಟಲ್ ಡಿಸ್‌ಪ್ಲೇ ಅನಾವರಣಗೊಳಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸುಮಾರು 20 ನಿಮಿಷಗಳ ಕಾಲ ಸರ್ಕಾರದ ಕಾರ್ಯಕ್ರಮಗಳ ಪ್ರಚಾರದ ಸ್ಲೆ„ಡ್ಸ್, ಕರ್ನಾಟಕ ಪ್ರವಾಸೋದ್ಯಮ ಪ್ರೋಮೊ ಮುಂತಾದವುಗಳನ್ನು ವೀಕ್ಷಿಸಿದರು.
Related Articles
Advertisement
ವಾರ್ತಾ ಇಲಾಖೆಯು ತನ್ನ ಒಡೆತನದಲ್ಲಿರುವ 2500ಕ್ಕೂ ಹೆಚ್ಚು ಹೆದ್ದಾರಿ ಫಲಕಗಳಲ್ಲಿ ಫ್ಲೆಕ್ಸ್‌ಅನ್ನು ಅಳವಡಿಸಿ ಸರ್ಕಾರದ ವಿವಿಧ ಯೋಜನೆಗಳಿಗೆ ಪ್ರಚಾರ ನೀಡುತ್ತಿದೆ. ರಾಜ್ಯದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ. ಇದಕ್ಕೆ ಪರ್ಯಾಯವಾಗಿ ಮೊದಲ ಹೆಜ್ಜೆಯಾಗಿ ಇಲಾಖೆಯು ಡಿಜಿಟಲ್ ಫಲಕಗಳ ಮೂಲಕ ಪ್ರಚಾರ ನೀಡಲು ಕ್ರಮ ಕೈಗೊಳ್ಳುತ್ತಿದೆ.
ಕಾರ್ಯಕ್ರಮಗಳ ನೇರ ಪ್ರಸಾರಕ್ಕೆ: ರಾಜ್ಯದಲ್ಲಿ ಅಳವಡಿಸುತ್ತಿರುವ ಹೊಸ ಡಿಜಿಟಲ್ ಪ್ರಚಾರ ಫಲಕಗಳಲ್ಲಿ ಸರ್ಕಾರದ ಯೋಜನೆಗಳನಷ್ಟೇ ಪ್ರಚಾರ ಮಾಡುವುದಿಲ್ಲ. ರಾಜ್ಯದ ಕಲೆ ಸಂಸ್ಕೃತಿ ಮತ್ತು ಪರಂಪರೆ ಮತ್ತು ಪ್ರವಾಸಿ ತಾಣಗಳು ಸೇರಿದಂತೆ ನಾಡು – ನುಡಿಯನ್ನು ಇಲ್ಲಿ ಪ್ರತಿಬಿಂಬಿಸಲಾಗುವುದು.
ಸಾಮಾಜಿಕ ಸಂದೇಶಗಳು ಮತ್ತು ರಸ್ತೆ ಸುರಕ್ಷತೆಯ ಬಗ್ಗೆಯೂ ಇದರ ಮೂಲಕ ಜನರಿಗೆ ಮಾಹಿತಿ ನೀಡಲಾಗುವುದು. ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮಗಳನ್ನು ಸಹ ನೇರ ಪ್ರಸಾರದ ರೂಪದಲ್ಲಿ ಎಲ್ಲಾ ಡಿಜಿಟಲ್ ಪ್ರಚಾರ ಫಲಕಗಳಲ್ಲೂ ಅವುಗಳನ್ನು ಪ್ರದರ್ಶಿಸಬಹುದಾಗಿದೆ.
ಸರ್ಕಾರಿ ಯೋಜನೆಗಳನ್ನು ಪ್ರಚಾರ ಪಡಿಸುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಈ ಡಿಜಿಟಲ್ ಪ್ರಚಾರ ಫಲಕಗಳನ್ನು ಸ್ಥಳೀಯ ಜಿಲ್ಲಾಡಳಿತವು ಸಹ ಸಾರ್ವಜನಿಕರಿಗೆ ಮಾಹಿತಿ ನೀಡಲು ಬಳಸಿಕೊಳ್ಳಬಹುದಾಗಿದೆ ಎಂದರು.
ಈ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಸಂಸದ ಧ್ರುವನಾರಾಯಣ, ಮೇಯರ್ ಎಂ.ಜೆ. ರವಿಕುಮಾರ್, ಶಾಸಕರಾದ ಎಂ.ಕೆ.ಸೋಮಶೇಖರ್, ವಾಸು, ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಎ. ಆರ್. ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.