Advertisement

ಉ.ಪ್ರ. ಸಹಿತ 5 ವಿಧಾನಸಭೆ ಚುನಾವಣೆ ಬಗ್ಗೆ ಕಾರ್ಯಕಾರಿಣಿಯಲ್ಲಿ ಚರ್ಚೆ

12:58 AM Nov 07, 2021 | Team Udayavani |

ಬೆಂಗಳೂರು/ಹೊಸದಿಲ್ಲಿ: ಮುಂಬರುವ ಪಂಚರಾಜ್ಯ ವಿಧಾನಸಭೆ ಚುನಾವಣೆಗಳಿಗಾಗಿ ಈಗಿನಿಂದಲೇ ಸಿದ್ಧತೆ ಆರಂಭಿಸಿರುವ ಬಿಜೆಪಿ, ಮೊದಲ ಹೆಜ್ಜೆಯಾಗಿ ರವಿವಾರ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಕರೆದಿದೆ.

Advertisement

ಮುಂದಿನ ವರ್ಷದ ಮೊದಲ ಭಾಗದಲ್ಲಿ ಉತ್ತರ ಪ್ರದೇಶ ಸಹಿತ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಬಗ್ಗೆ ಮತ್ತು ನ. 2ರಂದು ಕರ್ನಾಟಕ ಸಹಿತ 13 ರಾಜ್ಯಗಳ ವಿಧಾನಸಭೆ ಮತ್ತು ಲೋಕಸಭೆ ಉಪಚುನಾವಣೆಗಳಲ್ಲಿ ಪಕ್ಷಕ್ಕೆ ಸಿಕ್ಕಿದ ಮಿಶ್ರ ಫ‌ಲಿತಾಂಶಗಳ ಬಗ್ಗೆ ಪ್ರಮುಖವಾಗಿ ಚರ್ಚೆಯಾಗುವ ಸಾಧ್ಯತೆಗಳು ಇವೆ. ಕೊರೊನಾ ಸೋಂಕಿನ ತೀವ್ರತೆ ಕಡಿಮೆಯಾದ ಬಳಿಕ ನಡೆಯುತ್ತಿರುವ ಮೊದಲ ಕಾರ್ಯಕಾರಿಣಿ ಸಭೆ ಇದು. ಹೀಗಾಗಿ ಇದಕ್ಕೆ ಭಾರೀ ಮಹತ್ವವಿದೆ ಎಂದು ಶನಿವಾರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ತಿಳಿಸಿದರು.

ಹೊಸದಿಲ್ಲಿಯಲ್ಲಿ ನಡೆಯಲಿರುವ ಕಾರ್ಯಕಾರಿಣಿಯಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವರು ಭಾಗವಹಿಸಲಿದ್ದಾರೆ. ಜೆ.ಪಿ. ನಡ್ಡಾ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಲಿದ್ದಾರೆ. ಸಂಜೆಯ ಸಮಾರೋಪ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಒಂದು ಪ್ರಮುಖ ನಿರ್ಣಯವನ್ನು ಮಂಡಿಸಿ ಅಂಗೀಕರಿಸಲಾಗುತ್ತದೆ ಎಂದು ಅರುಣ್‌ ಸಿಂಗ್‌ ಹೇಳಿದ್ದಾರೆ.

ಇದನ್ನೂ ಓದಿ:2026ರಲ್ಲಿ ಚಂದ್ರನಲ್ಲಿ ರೋವರ್‌; ಆಸ್ಟ್ರೇಲಿಯಾ ಬಾಹ್ಯಾಕಾಶ ಸಂಸ್ಥೆ, ನಾಸಾದಿಂದ ಹೊಸ ಯೋಜನೆ

ನ. 2ರಂದು ಪ್ರಕಟವಾದ ಫ‌ಲಿತಾಂಶದಲ್ಲಿ ಮಧ್ಯ ಪ್ರದೇಶ, ಅಸ್ಸಾಂನಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದೆ. ಮುಂದಿನ ವರ್ಷ ಚುನಾವಣೆ ನಡೆಯಲಿರುವ ಹಿಮಾಚಲ ಪ್ರದೇಶದಲ್ಲಿ ಎಲ್ಲ 3 ವಿಧಾನಸಭೆ, ಲೋಕಸಭೆಯ 1 ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಸೋಲನುಭವಿಸಿದೆ. ಇದರ ಜತೆಗೆ ಪ. ಬಂಗಾಲದಲ್ಲಿ ಎಲ್ಲ 4 ಕ್ಷೇತ್ರಗಳಲ್ಲಿಯೂ ಬಿಜೆಪಿ ಸೋತಿದೆ. ಈ ಅಂಶಗಳು ಚರ್ಚೆಯಾಗುವ ಸಾಧ್ಯತೆಗಳಿವೆ.

Advertisement

ರಾಜ್ಯದಿಂದ 18 ಮಂದಿಗೆ ಆಹ್ವಾನ
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆ ರಾಜ್ಯದಿಂದ 18 ಮಂದಿ ಆಹ್ವಾನಿತರಿದ್ದು, ರಾ.ಪ್ರ. ಕಾರ್ಯದರ್ಶಿ ಸಿ.ಟಿ. ರವಿ ಮತ್ತು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭಾಗಿಯಾಗಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಮಾಜಿ ಸಿಎಂಗಳಾದ ಬಿಎಸ್‌ವೈ, ಜಗದೀಶ ಶೆಟ್ಟರ್‌, ಇತರ ಕೇಂದ್ರ ಸಚಿವರು ಬೆಂಗಳೂರಿನ ಬಿಜೆಪಿ ಕಚೇರಿಯಿಂದಲೇ ವರ್ಚುವಲ್‌ ಮೂಲಕ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next