ಉತ್ತರ ಪ್ರದೇಶ : ಕೋವಿಡ್ ಸೋಂಕಿನ ಎರಡನೇ ಅಲೆಯ ಕಾರಣದಿಂದಾಗಿ ರಾಜ್ಯದ ಹಳ್ಳಿ ಹಳ್ಳಿಗಳಲ್ಲಿ ಕನಿಷ್ಠ 10 ಮಂದಿ ಸೋಂಕಿನಿಂದ ಮೃತರಾಗಿದ್ದಾರೆ, ಮೊದಲ ಅಲೆಯಿಂದ ಏನೂ ಪಾಠ ಕಲಿತಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ರಾಜ್ಯದ ಬಿಜೆಪಿ ಕಾರ್ಯಕಾರಿ ಸಮಿತಿ ಸದಸ್ಯ ರಾಮ್ ಇಕ್ಬಾಲ್ ಸಿಂಗ್ ತಿರುಗಿ ಬಿದ್ದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಗ್, ಕೊವಿಡ್-19 ರ ಮೊದಲ ಅಲೆಯಿಂದ ಆರೋಗ್ಯ ಇಲಾಖೆಯು ಯಾವುದೇ ಪಾಠಗಳನ್ನು ಕಲಿಯಲಿಲ್ಲ, ಇದು ಎರಡನೇ ಅಲೆಯಲ್ಲಿ ಕಾಯಿಲೆಯಿಂದಾಗಿ ಹೆಚ್ಚಿನ ಸಂಖ್ಯೆಯ ಸಾವಿಗೆ ಕಾರಣವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಹೊಸ ವೈರಾಣು ಪತ್ತೆಗೆ ಜೀನೋಮ್ ಸೀಕ್ವೆನ್ಸ್ : ಗಡಿಭಾಗಗಳಲ್ಲಿ ಹೆಚ್ಚಿನ ಪರೀಕ್ಷೆ : ಸುಧಾಕರ್
ಹಳ್ಳಿ ಹಳ್ಳಿಗಳಲ್ಲಿ ಸೋಂಕು ಸಾವು ನೋವು ಕೊಟ್ಟಿದೆ. ಪ್ರತಿ ಹಳ್ಳಿಯಲ್ಲಿ ಕನಿಷ್ಟ ಹತ್ತು ಮಂದಿ ಸಾವನ್ನಪ್ಪಿದ್ದಾರೆ. ಸೋಂಕಿಗೆ ಬಲಿಯಾದವರ ಕುಟುಂಬಗಳಿಗೆ 10 ಲಕ್ಷ ರೂ.ಗಳನ್ನು ಪರಿಹಾರವಾಗಿ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.
ಇನ್ನು, ಅಲ್ಲಿನ ವ್ಯವಸ್ಥೆಗಳನ್ನು ಟೀಕಿಸಿದ ಅವರು, ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ 34 ಲಕ್ಷ ಜನಸಂಖ್ಯೆ ಹೊಂದಿರುವ ಈ ಜಿಲ್ಲೆಯಲ್ಲಿ ವೈದ್ಯರು ಅಥವಾ ಔಷಧಿಗಳ ಕೊರತೆ ಇದೆ.
ಬಲ್ಲಿಯಾ ಭೇಟಿಯ ಸಂದರ್ಭದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಆರೋಗ್ಯ ಇಲಾಖೆ ಮಾಡಿದ ವ್ಯವಸ್ಥೆಗಳ ಬಗ್ಗೆ ಹರ್ಷ ವ್ಯಕ್ತಪಡಿಸಿರುವುದನ್ನು ಸಿಂಗ್ ಗೆ ಕೇಳಿದಾಗ, ಅಧಿಕಾರಿಗಳು ಯೋಗಿಯವರನ್ನು ದಾರಿ ತಪ್ಪಿಸಿದ್ದಾರೆ. ಸತ್ಯವನ್ನು ಮುಚ್ಚಿಟ್ಟಿದ್ದಾರೆ ಎಂದು ಅವರು ವಿಷಾದಪಟ್ಟಿದ್ದಾರೆ.
ಇದನ್ನೂ ಓದಿ : ಕೆಂಪೇಗೌಡರ ಕನಸಿನ ಬೆಂಗಳೂರನ್ನು ಸಾಕಾರಗೊಳಿಸಲು ಸರ್ಕಾರ ಬದ್ಧ: ಸಚಿವ ಆರ್. ಅಶೋಕ್