Advertisement

ಉತ್ತರ ಪ್ರದೇಶ : ಹೃದಯಾಘಾತದಿಂದ ಬಿಜೆಪಿ ಶಾಸಕ ನಿಧನ, ಯೋಗಿ ಆದಿತ್ಯನಾಥ್ ಸಂತಾಪ

12:40 PM Sep 06, 2022 | Team Udayavani |

ಉತ್ತರ ಪ್ರದೇಶ : ಉತ್ತರ ಪ್ರದೇಶ ಲಖಿಂಪುರ ಖೇರಿ ಬಿಜೆಪಿ ಶಾಸಕ ಅರವಿಂದ್ ಗಿರಿ ಅವರು ಮಂಗಳವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

Advertisement

ಮಂಗಳವಾರ ಬೆಳಿಗ್ಗೆ ಕಾರಿನಲ್ಲಿ ಲಕ್ನೋ ಗೆ ತೆರಳುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡಿದ್ದು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಅಷ್ಟೋತ್ತಿಗಾಗಲೇ ಕೊನೆಯುಸಿರೆಳೆದಿದ್ದರು ಎಂದು ಅರವಿಂದ್ ಗಿರಿ ಅವರ ಸಹೋದರ ಮಾಹಿತಿ ನೀಡಿದ್ದಾರೆ.

ಗಿರಿ ಅವರು ವಿದ್ಯಾರ್ಥಿ ಜೀವನದಲ್ಲೇ ರಾಜಕೀಯದಲ್ಲಿ ತನ್ನನು ತಾನು ತೊಡಗಿಸಿಕೊಂಡು ಸೃಜನಶೀಲರಾಗಿದ್ದರು ಎನ್ನಲಾಗಿದೆ.

1993ರಲ್ಲಿ ಸಮಾಜವಾದಿ ಪಕ್ಷಕ್ಕೆ ಸೇರಿದ ಅರವಿಂದ ಗಿರಿ, 2006 ರಲ್ಲಿ ನಡೆದ ಮೊದಲ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಗೆದ್ದರು. ಬಳಿಕ ಭಾರತೀಯ ಜನತಾ ಪಾರ್ಟಿಗೆ ಸೇರಿದ ಅವರು 2017 ಮತ್ತು 2022 ಯುಪಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆದ್ದಿದ್ದಾರೆ.

ಲಖಿಂಪುರ ಖೇರಿ ಜಿಲ್ಲೆಯ ಗೋಲಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಗಿರಿ ಅವರ ನಿಧನಕ್ಕೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ.

Advertisement

ಅರವಿಂದ್ ಅವರ ಪತ್ನಿ ಸುಧಾ ಗಿರಿ ಕೂಡ ರಾಜಕೀಯದಲ್ಲಿದ್ದು, 2007ರಲ್ಲಿ ಗೋಲನಗರ ಪಾಲಿಕೆ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದಿದ್ದರು.

ಇದನ್ನೂ ಓದಿ : ಮಣಿಪಾಲ: ಹಳೆ ಬಟ್ಟೆಗಳಿಗೆ ಕಲಾತ್ಮಕ ಸ್ಪರ್ಶ ಸಾರುವ ಸಾರಿಕಾ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next